ಮಡಿಕೇರಿ, ಮಾ. ೧೮: ಪ್ರಸ್ತುತ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಎಲ್ಲಾ ಸಾರ್ವಜನಿಕರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಕೋರಲಾಗಿದೆ. ಈ ಬಗ್ಗೆ ‘ಶಕ್ತಿ’ ಮೂಲಕ ಮನವಿ ಮಾಡಿರುವ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅವರು ಈ ಬಗ್ಗೆ ಪ್ರಯಾಣಿಕರು ಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ.