ಮಡಿಕೇರಿ, ಮಾ. ೧೮: ಜಿಲ್ಲಾ ಅಗ್ರಣೀ ಬ್ಯಾಂಕ್ ೨೦೨೧-೨೨ನೇ ಸಾಲಿನ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಜಿಲ್ಲಾಧಿಕಾರಿ, ಚಾರುಲತಾ ಸೋಮಲ್ ಅವರು ಲೀಡ್ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆದ ವಿಶೇಷ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದ ನಂತರ ಬ್ಯಾಂಕರುಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಲಾಕ್‌ಡೌನ್ ಸಂದರ್ಭದಿAದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು, ಅಗತ್ಯವಿರುವವರಿಗೆ ಸಾಲ ವಿತರಿಸುವುದರ ಮೂಲಕ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು. ಈ ಬಾರಿಯ ವಾರ್ಷಿಕ ಸಾಲ ಯೋಜನೆಯು ‘‘ಅಔಐಐಇಅಖಿIಗಿIZಂಖಿIಔಓ ಔಈ ಂಉಖIಅUಐಖಿUಖAಐ PಖಔಆUಅಇ ಈಔಖ ಇಓಊಂಓಅIಓಉ ಈಂಖಒಇಖS Iಓಅಔಒಇ’’ಗೆ ಹೆಚ್ಚಿನ ಒತ್ತು ನೀಡಿದ್ದು ಜಿಲ್ಲೆಯ ಕೃಷಿಕರಿಗೆ ವರದಾನವಾಗಲಿದೆ ಎಂದು ಸಭೆಗೆ ತಿಳಿಸಿದರು.

ನಂತರ ಮಾತನಾಡಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮೈಸೂರು ವಲಯದ ಸಹಾಯಕ ಮಹಾ ಪ್ರಬಂಧಕ ರವಿಚಂದರ್ ಅವರು ೨೦೨೧-೨೨ ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ವಯ ರೂ.೪೫೦೦/- ಕೋಟಿ ಗುರಿ ನಿಗದಿಪಡಿಸಿದ್ದು, ಅದರಲ್ಲಿ ೮೭ ಪ್ರತಿಶತ (ರೂ. ೩೯೦೦/- ಕೋಟಿ) ಆದ್ಯತಾ ವಲಯಕ್ಕೆ ಮೀಸಲಿಟ್ಟಿದ್ದು ಅವುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ರೂ.೨೬೦೦/- ಕೋಟಿ, ಕಿರು ಮತ್ತು ಮಧ್ಯಮ ಗಾತ್ರದ ಉದ್ಯಮ ಕ್ಷೇತ್ರಕ್ಕೆ ರೂ.೭೦೦/- ಕೋಟಿ ಮತ್ತು ಇತರೆ ಆದ್ಯತಾ ವಲಯಕ್ಕೆ ರೂ. ೬೦೦/- ಕೋಟಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದುವರೆದು, ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಜನರಿಗೆ ಸಾಲ ವಿತರಿಸುವುದರ ಮೂಲಕ ನಿಗದಿಪಡಿಸಿರುವ ಗುರಿಯನ್ನು ಸಾಧಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಲೀಡ್ ಬ್ಯಾಂಕ್ ಮುಖ್ಯಸ್ಥ ಆರ್.ಕೆ. ಬಾಲಚಂದ್ರ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ವಾರ್ಷಿಕ ಸಾಲ ಯೋಜನೆ ಬಿಡುಗಡೆ ಮಾಡಲಾಗಿದ್ದು, ಈ ಕ್ರಿಯಾ ಯೋಜನೆಯು ನಬಾರ್ಡ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿದ ಸಾಮರ್ಥ್ಯ ಆಧಾರಿತ ಸಾಲ ಯೋಜನೆಯ ನೆರವನ್ನು ಪಡೆದು ಬ್ಯಾಂಕುಗಳ ವಲಯವಾರು ಹಂಚಿಕೆಗಳಿಗನುಸಾರವಾಗಿ ಜೊತೆಗೆ, ಹಿಂದಿನ ವರ್ಷದ ಆಯಾ ಬ್ಯಾಂಕುಗಳ ಸಾಧನೆಯನ್ನು ಮಾನದಂಡವಾಗಿಟ್ಟುಕೊAಡು ವಾರ್ಷಿಕ ಸಾಲ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರು.

ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿರುವುದರಿಂದ ಕೃಷಿ ಮತ್ತು ಆದ್ಯತಾ ವಲಯಕ್ಕೆ ಒತ್ತು ನೀಡುವ ಉದ್ದೇಶದಿಂದ ಗುರಿಯನ್ನು ನಿಗದಿಪಡಿಸಲಾಗಿದೆ ಹಾಗೂ ೨೦೨೧-೨೨ನೇ ವರ್ಷವು ಈಂಖಒಇಖS ಅಔಐಐಇಅಖಿIಗಿIZಂಖಿIಔಓ ಔಈ ಂಉಖIಅUಐಖಿUಖAಐ PಖಔಆUಅಇ ಈಔಖ ಇಓಊಂಓಅIಓಉ Iಓಅಔಒಇ ಎಂಬುದು ಘೋಷವಾಕ್ಯವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಲೀಡ್ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ರಾಮಚಂದ್ರ ನಾಯಕ್, ಕೆನರಾ ಬ್ಯಾಂಕಿನ ಪ್ರಬಂಧಕರಾದ ಪ್ರಕಾಶ್ ಜಿ ಸಿ, ಎಸ್.ಬಿ.ಐ. ನ ಮುಖ್ಯ ಪ್ರಬಂಧಕ ದಿನೇಶ್ ಪೈ, ಕೆ.ಜಿ.ಬಿ.ಯ ವಲಯ ಪ್ರಬಂಧಕ ಅಶೋಕ ಮತ್ತಿತರರು ಉಪಸ್ಥಿತರಿದ್ದರು.