ಮಡಿಕೇರಿ, ಮಾ. ೨೦: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ೨೦೧೯-೨೦ನೇ ಸಾಲಿನಲ್ಲಿ ರೈತರಿಗೆ ಬೆಳೆವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ಪ್ರಕ್ರಿಯೆಯನ್ನು ಪ್ರಥಮ ಬಾರಿಗೆ ಸಂರಕ್ಷಣೆ ತಂತ್ರಾAಶದ ಮುಖಾಂತರ ರೈತರ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಕೈಗೊಳ್ಳಲಾಗುತ್ತಿದೆ.

ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಬೆಳೆವಿಮೆ ಪರಿಹಾರ ಲೆಕ್ಕಚಾರ ಮಾಡಿ ಸಂರಕ್ಷಣೆ ತಂತ್ರಾAಶದ ಮುಖಾಂತರ ಇತ್ಯರ್ಥ ಪಡಿಸುವಾಗ ರೈತರು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸದೇ ಇದ್ದರೆ ರೈತರಿಗೆ ಬೆಳೆ ವಿಮೆ ಪರಿಹಾರ ಇತ್ಯರ್ಥ ಪಡಿಸುವಲ್ಲಿ ಅನಗತ್ಯ ವಿಳಂಬವಾಗುವ ಸಂಭವವಿದೆ.

ಇದಕ್ಕೆ ಸಂಬAಧಿಸಿದAತೆ ರೈತರು ಕೆಲವೊಂದು ಸಂದರ್ಭಗಳಲ್ಲಿ ಹಲವು ಬ್ಯಾಂಕ್ ಖಾತೆ ಹೊಂದಿದ್ದು, ಆಧಾರ್ ಲಿಂಕ್ ಮಾಡಿಸದೇ ಇದ್ದ ಸಂದರ್ಭಗಳಲ್ಲಿ ಅಥವಾ ಆಧಾರ್ ಲಿಂಕ್ ಮಾಡಿಸಿದ್ದರೂ ಖಾತೆಗಳನ್ನು ವರ್ಷಗಳಿಂದ ಉಪಯೋಗಿಸದೇ ಇದ್ದಲ್ಲಿ ಈ ರೈತರ ಖಾತೆಗಳಿಗೆ ನೇರ ನಗದನ್ನು ವರ್ಗಾಯಿಸುವಾಗ ಇಡಿಡಿoಡಿ iಟಿ ಂಜhಚಿಡಿ ಓumbeಡಿ , ಂಛಿಛಿouಟಿಣ iಟಿಚಿಛಿಣive, ಂಜhಚಿಡಿ ಓoಣ Seeಜeಜ, ಎಂದು ತಾಂತ್ರಿಕ ದೋಷಗಳು ಕಂಡು ಬಂದಿರುತ್ತವೆ. ಆದ್ದರಿಂದ ಬೆಳೆ ವಿಮೆಗೆ ಹೆಸರು ನೋಂದಾಯಿಸಿದ ರೈತರು ಸಕಾಲದಲ್ಲಿ ಬೆಳೆ ವಿಮೆ ಪರಿಹಾರ ಇತ್ಯರ್ಥಪಡಿಸಲು ಅನುಕೂಲವಾಗುವಂತೆ ಹಾಗೂ ಇತರೆ ರೈತರು ಇಲಾಖೆಯ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ. ಶೇಕ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.