ಮುಳ್ಳೂರು, ಮಾ. ೧೯: ವಿದ್ಯಾರ್ಥಿಗಳು ಕಲಿಕೆಯ ಶಿಕ್ಷಣದ ಜೊತೆಯಲ್ಲಿ ಅನುಭವದ ಶಿಕ್ಷಣವನ್ನು ರೂಢಿಸಿಕೊಂಡರೆ ಮಾತ್ರ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ ಶಿಕ್ಷಕ ಕೆ.ಪಿ. ಜಯಕುಮಾರ್ ಅಭಿಪ್ರಾಯಪಟ್ಟರು. ಸಮೀಪದ ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಕಲಿಕೆಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ವಿದ್ಯಾಭ್ಯಾಸದ ಅವಧಿ ಮುಗಿದ ನಂತರ ಬದುಕು ಕಟ್ಟಿಕೊಳ್ಳಬೇಕಾದರೆ ಜೀವನದಲ್ಲಿ ಅನುಭವ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅನುಭವದ ಶಿಕ್ಷಣವನ್ನು ಅಳವಡಿಕೊಳ್ಳಬೇಕೆಂದರು. ಶಾಲಾ-ಕಾಲೇಜುಗಳಲ್ಲಿ ರಾಷ್ಟಿçÃಯ ಸೇವಾ ಯೋಜನೆ, ಎನ್ಸಿಸಿ, ರೆಡ್ಕ್ರಾಸ್ ಮುಂತಾದ ಘಟಕಗಳನ್ನು ವಿದ್ಯಾರ್ಥಿಗಳ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಮತ್ತು ಸಮಾಜ ಹಾಗೂ ದೇಶಕ್ಕೆ ಸೇವೆ ನೀಡಲು ಪೂರಕವಾಗುವ ಉದ್ದೇಶದಿಂದ ಸ್ಥಾಪಿಸುತ್ತಾರೆ. ವಿದ್ಯಾರ್ಥಿಗಳು ರಾಷ್ಟಿçÃಯ ಸೇವಾ ಯೋಜನೆ ಘಟಕದಲ್ಲಿ ಪಾಲ್ಗೊಂಡು ಶಿಬಿರಗಳಲ್ಲಿ ತೊಡಗಿಸಿಕೊಂಡು ಅಲ್ಲಿ ಕಲಿತ ಅನುಭವ, ಬಾಂಧವ್ಯ, ಮಾನವೀಯತೆ, ಮುಂತಾದ ಅವಿನಾಭಾವ ಸಂಬAಧ ಮೌಲ್ಯಗಳನ್ನು ತನ್ನಲ್ಲಿ ಅಳವಡಿಸಿಕೊಂಡು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಸಂಪಾದಿಸುವAತೆ ಸಲಹೆ ನೀಡಿದರು.
ಯೋಜನಾಧಿಕಾರಿ ಎನ್.ಎಂ. ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಸಾಲಿನಲ್ಲಿ ಕೋವಿಡ್ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಪದವಿ ತರಗತಿ ಪ್ರಾರಂಭಗೊAಡಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟಿçÃಯ ಸೇವಾ ಯೋಜನಾಧಿಕಾರಿಗಳ ಆದೇಶದಂತೆ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕವನ್ನು ಸ್ಥಾಪಿಸಲಾಗಿದೆ. ಅಧಿಕಾರಿಗಳ ನಿರ್ದೇಶನದಂತೆ ಘಟಕದ ವತಿಯಿಂದ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದರು. ಕಾಲೇಜು ಪ್ರಾಂಶುಪಾಲ ಇ.ಎಂ. ದಯಾನಂದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ಉಪನ್ಯಾಸಕ ಮೋಹನ್, ಉಪನ್ಯಾಸಕರಾದ ಹೆಚ್.ಎಂ. ವಿವೇಕ್, ಬಿ.ಎನ್. ಪೊನ್ನಪ್ಪ, ಶೋಭ ಮುಂತಾದವರಿದ್ದರು.