ನಾಪೋಕ್ಲು, ಮಾ. ೨೦: ಮುಂದಿನ ತಿಂಗಳ ಏ. ೯, ೧೦ ಮತ್ತು ೧೧ ರಂದು ಕೊಡವ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ನಾಪೋಕ್ಲು ಕೊಡವ ಸಮಾಜದ ಕ್ರೀಡಾ, ಸಾಂಸ್ಕೃತಿಕ ಮತ್ತು ಮನರಂಜನಾ ಕೂಟದ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ ಹೇಳಿದರು.
ಕೊಡವ ಸಮಾಜದ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪಂದ್ಯಾಟವನ್ನು ಕೋವಿಡ್ ೧೯ರ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಆ ಪಂದ್ಯಾಟವನ್ನು ಈ ಬಾರಿ ಏ. ೯, ೧೦ ಮತ್ತು ೧೧ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುಮಾರು ೪೦ ಲಕ್ಷ ರೂ. ವೆಚ್ಚದಲ್ಲಿ ಕೊಡವ ಸಮಾಜದಲ್ಲಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವದು ನಾಪೋಕ್ಲು, ಮಾ. ೨೦: ಮುಂದಿನ ತಿಂಗಳ ಏ. ೯, ೧೦ ಮತ್ತು ೧೧ ರಂದು ಕೊಡವ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಾಪೋಕ್ಲು ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ನಾಪೋಕ್ಲು ಕೊಡವ ಸಮಾಜದ ಕ್ರೀಡಾ, ಸಾಂಸ್ಕೃತಿಕ ಮತ್ತು ಮನರಂಜನಾ ಕೂಟದ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ ಹೇಳಿದರು.
ಕೊಡವ ಸಮಾಜದ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪಂದ್ಯಾಟವನ್ನು ಕೋವಿಡ್ ೧೯ರ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಆ ಪಂದ್ಯಾಟವನ್ನು ಈ ಬಾರಿ ಏ. ೯, ೧೦ ಮತ್ತು ೧೧ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುಮಾರು ೪೦ ಲಕ್ಷ ರೂ. ವೆಚ್ಚದಲ್ಲಿ ಕೊಡವ ಸಮಾಜದಲ್ಲಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವದು ಪಂದ್ಯಾಟಕ್ಕೆ ೩ ಲಕ್ಷ ರೂ. ವೆಚ್ಚವಾಗಲಿದ್ದು, ದಾನಿಗಳಿಂದ, ಪ್ರಾಯೋಜಕರಿಂದ ಹಣ ಸಂಗ್ರಹಿಸಿ ಎಲ್ಲಾ ತಯಾರಿ ನಡೆಸಲಾಗಿದೆ ಎಂದರು. ಪಂದ್ಯಾಟದಲ್ಲಿ ಪಾಲ್ಗೊಳ್ಳುವ ತಂಡಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಏ. ೪ ಕೊನೆ ದಿನಾಂಕವಾಗಿದೆ ಎಂದು ಮಾಹಿತಿ ನೀಡಿದ ಅವರು ಪಂದ್ಯಾಟದ ಯಶಸ್ವಿಗೆ ಎಲ್ಲರ ಸಹಕಾರ ಕೋರುವುದಾಗಿ ಹೇಳಿದರು..
ಗೋಷ್ಠಿಯಲ್ಲಿ ಕ್ಲಬ್‌ನ ಕಾರ್ಯದರ್ಶಿ ನಾಯಕಂಡ ದೀಪು ಚಂಗಪ್ಪ, ನಿರ್ದೇಶಕ ಬೊಪ್ಪೇರ ಜಯಾ ಉತ್ತಪ್ಪ, ಪಂದ್ಯಾಟದ ತಾಂತ್ರಿಕ ನಿರ್ದೇಶಕ ಪೊರುಕೊಂಡ ಸುನಿಲ್ ಇದ್ದರು.