ಗೋಣಿಕೊಪ್ಪಲು, ಮಾ. ೧೯: ತಾಲೂಕು ವೈದ್ಯಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರ ಗೋಣಿಕೊಪ್ಪ ಇವರ ವತಿಯಿಂದ ಗೋಣಿಕೊಪ್ಪಲುವಿನಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ ನಡೆಸಲಾಯಿತು.

ಸ್ಥಳೀಯ ಚೆಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಸುನಿಲ್ ಮಾದಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ ತಂಬಾಕು ನಿಯಂತ್ರಣ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಮೇಲ್ವಿಚಾರಕರು, ಕಚೇರಿ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಪಾಲ್ಗೊಂಡಿದ್ದರು. ನಗರದಲ್ಲಿ ಜಾಥಾ ನಡೆಸಿ, ವರ್ತಕರುಗಳಿಗೆ ಮಾಹಿತಿ ನೀಡಲಾಯಿತು. ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.