ಕೂಡಿಗೆ, ಮಾ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಶ್ರೀ ಬಸವೇಶ್ವರ ದೇವಾಲಯದಿಂದ ಕಾವೇರಿ ನದಿ ವರೆಗಿನ ರಸ್ತೆ, ಚರಂಡಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಪ್ರಾರಂಭಿಸಲಾಯಿತು.

ಕೂಡುಮAಗಳೂರು ಗ್ರಾಮದ ಪ್ರಮುಖ ರಸ್ತೆಯಾಗಿದ್ದ ಈ ರಸ್ತೆಯು ಮಳೆಯ ನೀರಿನ ಒತ್ತಡದಿಂದಾಗಿ ಮುಚ್ಚಿಹೋಗಿತು. ನೀರು ರಸ್ತೆಯ ಮೇಲೆ ಹರಿಯುತ್ತಿತ್ತು. ಇದರ ಬಗ್ಗೆ ಪ್ರಥಮ ಮಾಸಿಕ ಸಭೆಯಲ್ಲಿ ಚರ್ಚಿಸಿ ನಂತರ ಶೀಘ್ರವಾಗಿ ಕಾಮಗಾರಿಯನ್ನು ಆರಂಭಿಸುವAತೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗದವರು ಜೆಸಿಬಿ ಯಂತ್ರದ ಮೂಲಕ ಚರಂಡಿ ಸಂಪರ್ಕದ ವ್ಯವಸ್ಥೆಯನ್ನು ಕೈಗೊಂಡು ನೀರು ಸರಾಗವಾಗಿ ಹರಿಯುವ ಕೆಲಸದಲ್ಲಿ ತೊಡಗಿದ್ದಾರೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ವಾರ್ಡ್ನ ಸದಸ್ಯರಾದ ಮಂಜುನಾಥ, ಚೈತಾ ಮಂಜುನಾಥ ಮತ್ತು ಯುವಕ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.