ಮಡಿಕೇರಿ, ಮಾ. ೨೦: ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ತಾ. ೨೪ ರಂದು ನಡೆಯಲಿದೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಕೆ. ಸುರೇಶ್ ಈ ಕುರಿತು ಮಾಹಿತಿ ನೀಡಿದರು. ಅಂದು ಬೆಳಿಗ್ಗೆ ೧೦ ಗಂಟೆಗೆ ಮೈತ್ರಿ ಭವನದಲ್ಲಿ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನಿವೃತ್ತ ಆರಕ್ಷಕ ಉಪ ಮಹಾ ನಿರೀಕ್ಷಕರಾದ ಟಿ.ಆರ್. ಸುರೇಶ್, ಎಸ್ಪಿ ಕ್ಷಮಾ ಮಿಶ್ರಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಬಿ.ಆರ್. ಲಿಂಗಪ್ಪ, ಪರಶಿವ, ಕಾರ್ಯದರ್ಶಿ ಅಚ್ಚುತ್ತನ್, ಖಜಾಂಚಿ ಭೀಮಯ್ಯ, ಸದಸ್ಯ ಕಾವೇರಪ್ಪ ಉಪಸ್ಥಿತರಿದ್ದರು.