ಮಡಿಕೇರಿ, ಮಾ. ೨೦: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಂ ಅವರ ಸ್ಮರಣಾರ್ಥ ಸಾಮಾಜಿಕ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ೨೦೨೧-೨೨ನೇ ಸಾಲಿನ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ.
ಆದ್ದರಿಂದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದರಿಂದ ತಾ. ೨೪ ರೊಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಅರ್ಜಿಯನ್ನು ಉಪನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧ ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾ. ೦೮೨೭೨-೨೨೩೫೫೨. ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾ.೦೮೨೭೬-೨೮೧೧೧೫. ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವೀರಾಜಪೇಟೆ ತಾ.೦೮೨೭೪-೨೪೯೪೭೬ ಪಡೆಯಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.