ಕುಶಾಲನಗರ, ಮಾ. ೧೯: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ವೆಂಕಟೇಶ್ವರ ಬಡಾವಣೆಯ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ಭರವಸೆ ನೀಡಿದರು.
ಕುಶಾಲನಗರ ಪಟ್ಟಣದ ವೆಂಕಟೇಶ್ವರ ಬಡಾವಣೆಯ ಸೇವಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಮಾಸಿಕ ಸಭೆಯಲ್ಲಿ ಪಟ್ಟಣ ಪಂಚಾಯತ್‌ನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವಾರ್ಡಿನ ಸದಸ್ಯ ಸುರೇಶ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸುರೇಶ್ ಅವರು ಕುಶಾಲನಗರ ಪಟ್ಟಣ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಜೊತೆಗೆ ನೂತನ ತಾಲೂಕು ಕೇಂದ್ರವಾಗಿದೆ.
ವೆAಕಟೇಶ್ವರ ಬಡಾವಣೆ ಮೂಲಭೂತ ಸೌಕರ್ಯಗಳಿಂದ ವಂಚಿತಗೊAಡಿದೆ. ರಸ್ತೆ, ಚರಂಡಿ, ಬೀದಿದೀಪ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಸರ್ಕಾರದಿಂದ ಪಂಚಾಯಿತಿಗೆ ಬರುವ ಅನುದಾನದಲ್ಲಿ ಬಡಾವಣೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ವೆಂಕಟೇಶ್ವರ ಸೇವಾ ಸಮಿತಿಯ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಸುರೇಶ್, ಖಜಾಂಚಿ ಪರಮೇಶ್, ನಿರ್ದೇಶಕರಾದ ಕೆ. ಮೂರ್ತಿ, ಹನುಮೇಶ್, ಕೇಶವ, ವೆಂಕಟೇಶ್ ಮತ್ತು ಇತರೆ ಸದಸ್ಯರು ಹಾಜರಿದ್ದರು.