ಮಡಿಕೇರಿ, ಮಾ. ೨೦: ಸಮರ್ಥನಂ ಅಂಗವಿಕಲರ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ಆರೋಗ್ಯ ಮತ್ತು ಶುಚಿತ್ವ ಕಿಟ್ ವಿತರಣಾ ಕಾರ್ಯಕ್ರಮವು ತಾ. ೨೨ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಎಸ್. ಗೋಪಿನಾಥ್, ಸಮರ್ಥನಂ ಅಂಗವಿಕಲರ ಸಂಸ್ಥೆಯ ವ್ಯವಸ್ಥಾಪಕರ ಟ್ರಸ್ಟಿ ಡಾ. ಜಿ.ಕೆ. ಮಹಾಂತೇಶ್ ಇತರರು ಪಾಲ್ಗೊಳ್ಳಲಿದ್ದಾರೆ.