ಮಡಿಕೇರಿ, ಮಾ. ೨೧: ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರ ಸಭೆ ಟೌನ್ ಹಾಲ್‌ನಲ್ಲಿ ತಾ. ೨೨ ರಂದು (ಇಂದು) ಮಧ್ಯಾಹ್ನ ೨ ಗಂಟೆಗೆ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಸಾಂಪ್ರ‍್ರದಾಯಿಕ, ಪಾರಂಪರಿಕ ಪೌಷ್ಠಿಕ ಅಡುಗೆ ಸ್ಪರ್ಧೆಯನ್ನು ಸಾರ್ವಜನಿಕರಿಗೆ ಏರ್ಪಡಿಸಿದ್ದು, ಸಾರ್ವಜನಿಕರು ಪಾರಂಪರಿಕ ಪೌಷ್ಠಿಕ ಅಡುಗೆಯನ್ನು ಮನೆಯಲ್ಲೇ ತಯಾರಿಸಿ ಟೌನ್ ಹಾಲ್ ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕೆ ಇಡಲು ಕೋರಲಾಗಿದೆ.

ಅತ್ಯುತ್ತಮ ಪೌಷ್ಠಿಕ ಅಡುಗೆಗೆ ಬಹುಮಾನ ನೀಡಲಾಗುವುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.