ಮಡಿಕೇರಿ, ಮಾ. ೨೧: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅರ್ಥಶಾಸ್ತç ವಿಭಾಗ, ಪ್ರೊ. ಅಮರ್ಥ್ಯಸೇನ್ ವೇದಿಕೆ, ರಾಷ್ಟೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್ ಘಟಕ, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ‘ಕೋವಿಡ್-೧೯ ಮತ್ತು ಇತರ ಆರೋಗ್ಯ ಸಮಸ್ಯೆಗಳು’ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪಾಂಶುಪಾಲೆ ಪ್ರೊ. ಚಿತ್ರಾ ವೈ ಅವರು ವಹಿಸಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಟಿ.ಎನ್. ಅವರು ಕೋವಿಡ್-೧೯ರ ಬಗ್ಗೆ, ಸೋಕು ಹರಡದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು ಹಾಗೂ ಇತರ ಆರೋಗ್ಯಕ್ಕೆ ಸಂಬAಧಿಸಿದ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ನಿರೀಕ್ಷಕ ಶ್ರೀನಾಥ್ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬAಧಿಸಿದ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.
ಕಾಲೇಜಿನ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ದಯಾನಂದ ಕೆ.ಸಿ. ಮತ್ತು ಉಪನ್ಯಾಸಕಿ ಶಾಲಿನಿ ಕೆ.ಟಿ. ಉಪಸ್ಥಿತರಿದ್ದರು. ಕು.ನಸ್ರೀಯ ನಿರೂಪಿಸಿ, ವಿದ್ಯಾಶ್ರೀ ಸ್ವಾಗತಿಸಿ, ಕಾವ್ಯ ಹೆಚ್.ಆರ್. ವಂದಿಸಿದರು. ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.