*ಗೋಣಿಕೊಪ್ಪಲು, ಮಾ. ೨೧: ವದಂತಿಗಳಿಗೆ ಕಿವಿಯಾಗದೇ ಆರೋಗ್ಯ ದೃಷ್ಠಿಯಿಂದ ಕೊರೊನಾ ಲಸಿಕೆಯನ್ನು ಪಡೆದುಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ ಸಲಹೆ ನೀಡಿದ್ದಾರೆ.
ವೀರಾಜಪೇಟೆ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡ ಅವರು ಲಸಿಕೆ ವಿರುದ್ಧ ಹಲವು ಬಿನ್ನಾಭಿಪ್ರಾಯ ಗಳನ್ನು ಸಾಮಾಜಿಕ ಜಾಲತಾಣ ಗಳಲ್ಲಿ ಹರಿಯಬಿಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ನಮ್ಮ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರು ಯಾವುದೇ ಭಯವಿಲ್ಲದೇ ಲಸಿಕೆಯನ್ನು ಪಡೆದು ಕೊಳ್ಳಬಹುದಾಗಿದೆ.
ಲಸಿಕೆ ಪಡೆದುಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ. ಕಾರಣಗಳನ್ನು ನೀಡಿ ಲಸಿಕೆ ಪಡೆದುಕೊಳ್ಳುವ ಬಗ್ಗೆ ಹಿಂದೇಟು ಹಾಕಿದರೆ ಇದರ ದುಷ್ಪರಿಣಾಮವನ್ನು ಎದುರಿಸ ಬೇಕಾಗುತ್ತದೆ. ಇದರಿಂದ ಆತಂಕವಿಲ್ಲದೇ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಲಸಿಕೆಯನ್ನು ಪಡೆದುಕೊಳ್ಳಿ ಎಂದು ಕರೆ ನೀಡಿದರು.