*ಗೋಣಿಕೊಪ್ಪಲು, ಮಾ. ೨೧: ಎರಡನೇ ಹಂತದ ಕೊರೋನ ಆತಂಕ ಎದುರಾಗಿದ್ದು, ಸಾರ್ವಜನಿಕರು ಜಾಗೃತಿ ವಹಿಸಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸಬೇಕೆಂದು ಗೋಣಿಕೊಪ್ಪಲು ಪೊಲೀಸ್ ಠಾಣಾಧಿಕಾರಿ ಸುಬ್ಬಯ್ಯ ತಿಳಿಸಿದ್ದಾರೆ. ಆರೋಗ್ಯದ ದೃಷ್ಠಿಯಿಂದ ಜನರ ಹಿತಕಾಪಾಡುವ ಹಿನ್ನೆಲೆ ಪ್ರತಿಯೊಬ್ಬರೂ ಖಡ್ಡಾಯವಾಗಿ ಮಾಸ್ಕ್ ಧರಿಸಿ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ನಡೆಸಬೇಕೆಂದು ಸಲಹೆ ನೀಡಿದ್ದಾರೆ. ಗ್ರಾಹಕರು ಹಾಗೂ ವ್ಯಾಪಾರಿಗಳು ಈ ಬಗ್ಗೆ ತೀವ್ರ ನಿಗಾ ಇಟ್ಟು ಕೊರೋನ ಆತಂಕವನ್ನು ಕಡಿಮೆಮಾಡಲು ಜಾಗೃತರಾಗಬೇಕಾಗಿದೆ. ಈ ಕಾರಣ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನಿಯಮ ಪಾಲನೆ ಮಾಡದೇ ಇದ್ದಲ್ಲಿ ಕಾನೂನು ರೀತಿ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.