ಮಡಿಕೇರಿ, ಮಾ. ೨೧: ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್ ಕುಶಾಲನಗರದ ಹಾರಂಗಿ ಜಲಾಶಯ ಬಳಿ ಇರುವ ತೋಟಗಾರಿಕೆ ಇಲಾಖೆಯ ಸಸ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸ್ಥಳೀಯ ರೈತರ ಅನುಕೂಲಕ್ಕಾಗಿ ತೆಂಗು, ಕಾಳುಮೆಣಸು, ಮಾವು ಸೇರಿದಂತೆ ವಿವಿಧ ಸಸಿಗಳನ್ನು ಬೆಳಸಲಾಗುತ್ತಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ಕಡಿಮೆ ಬೆಲೆಗೆ ರೈತರಿಗೆ ನೀಡಲಾಗುವುದು ಎಂದು ಹೇಳಿದರು.

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮವಹಿಸಲಾಗುವುದು. ಹಾರಂಗಿ ಉದ್ಯಾನವನ ಅಭಿವೃದ್ಧಿಗೆ ಸಂಬAಧಿಸಿದAತೆ ಸಮಗ್ರ ವರದಿ ತರಿಸಿಕೊಂಡು ಪರಿಶೀಲಿಸಿ ಕ್ರಮಕೈಗೊಳಲಾಗುವುದು ಎಂದು ಸಚಿವರು ಹೇಳಿದರು.

ಈ ಹಿಂದೆ ರೈತರಿಗೆ ಶೇ. ೩೫ ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಈಗ ಬಜೆಟ್‌ನಲ್ಲಿ ಶೇ. ೫೦ ರಷ್ಟು ಸಹಾಯಧನವನ್ನು ನೀಡಲು ಕ್ರಮಕೈಗೊಳ್ಳಲಾಗಿದೆ. ತೋಟಗಾರಿಕೆ ಸಸ್ಯ ಕ್ಷೇತ್ರವು ೧೨೩ ಎಕರೆ ಪ್ರದೇಶವನ್ನು ಹೊಂದಿದ್ದು, ಅದರಲ್ಲಿ ೧೦೬ ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗಿದೆ. ೧೫ ಸಾವಿರ ತೆಂಗಿನ ಗಿಡಗಳು ರೈತರಿಗೆ ಜೂನ್ ಅಥವಾ ಜುಲೈ ತಿಂಗಳಿನಿAದ ಮಾರಾಟಕ್ಕೆ ಲಭ್ಯವಿದ್ದು, ಪ್ರತಿ ಗಿಡಕ್ಕೆ ೭೦ ರೂ. ನಂತೆ ವಿತರಿಸಲಾಗುವುದು.

ಕಾಳುಮೆಣಸು ೩.೫ ಲಕ್ಷ ಗಿಡಗಳು ಹಾಗೂ ೧೦ ಸಾವಿರ ಕಿತ್ತಳೆ ಗಿಡಗಳನ್ನು ಆಗಸ್ಟ್ ಮಾಹೆಯಿಂದ ರೈತರಿಗೆ ಕಡಿಮೆ ದರದಲ್ಲಿ ವಿತರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪುನಶ್ಚೇತನಕ್ಕೆ ಕ್ರಮ

ಕೊಡಗು ಜಿಲ್ಲೆಯ ತೋಟಗಾರಿಕೆ ಕೇಂದ್ರಗಳ ಪುನಶ್ಚೇತನ ಮಾಡುವ ಸಂಬAಧ ಕ್ರಿಯಾಯೋಜನೆ ರೂಪಿಸಲು ಸರಕಾರದ ಮೂಲಕ ಕ್ರಮಕೈಗೊಳ್ಳುವುದಾಗಿ ಸಚಿವ ಆರ್. ಶಂಕರ್ ತಿಳಿಸಿದ್ದಾರೆ.

ಕೊಡಗು ಜೇನು ಉತ್ಪಾದನೆಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಜೇನು ಕೃಷಿಗೆ ಪ್ರೋತ್ಸಾಹ ನೀಡುವ ಚಿಂತನೆ ಹರಿಸಲಾಗಿದೆ ಎಂದು ಸಚಿವರು ತಿಳಿಸಿದರು.

(ಮೊದಲ ಪುಟದಿಂದ) ಹಾರಂಗಿ ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಅಲ್ಲಿನ ೧೨೩ ಎಕರೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ತೋಟಗಾರಿಕೆ ಗಿಡಗಳನ್ನು ಬೆಳೆಸಲು ಅನುದಾನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಹಾರಂಗಿ ಉದ್ಯಾನವನ ನಿರ್ವಹಣೆಯನ್ನು ತೋಟಗಾರಿಕೆ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲು ಸ್ಥಳೀಯ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ ನಾಯಕ್ ಮನವಿಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಇಲಾಖೆಗಳ ನಡುವೆ ಪತ್ರ ವ್ಯವಹಾರ ನಡೆಸಲಾಗುವುದು ಎಂದರು.

ಕುಶಾಲನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರವಾಸ ಸಂದರ್ಭದಲ್ಲಿ ಎಲ್ಲಾ ತೋಟಗಾರಿಕೆ ಕೇಂದ್ರಗಳಿಗೆ ಭೇಟಿ ನೀಡುವ ಬಗ್ಗೆ ತಿಳಿಸಿದ ಅವರು ಹಾರಂಗಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಎಚ್.ಎಂ. ನಾಗರಾಜ್, ಉಪ ನಿರ್ದೇಶಕ ಎಚ್. ಶಶಿಧರ್, ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಸಹಾಯಕ ನಿರ್ದೇಶಕ ಎಸ್. ವರದರಾಜ್ ಮತ್ತಿತರರು ಇದ್ದರು.