ಕೂಡಿಗೆ, ಮಾ.೨೧ : ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ -ಕರ್ನಾಟಕ, ರಾಷ್ಟಿçÃಯ ಹಸಿರು ಪಡೆ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದಲ್ಲಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್(ಪರಿಸರ ಸಂಘ) ವತಿಯಿಂದ ವಿಶ್ವ ಅರಣ್ಯ ದಿನಾಚರಣೆ - ೨೦೨೧ ರ ಅಂಗವಾಗಿ 'ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಸಂರಕ್ಷಣೆ' ಕುರಿತು ಜಿಲ್ಲಾಮಟ್ಟದ ಪರಿಸರ ಜಾಗೃತಿ ಆಂದೋಲನ ಏರ್ಪಡಿಸಲಾಗಿತ್ತು.

ವಿಶ್ವ ಅರಣ್ಯ ದಿನದ ಅಂಗವಾಗಿ ಶಾಲಾವರಣದಲ್ಲಿ ಹೊಂಗೆ ಗಿಡವನ್ನು ನೆಡುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದ ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ಶಾಲೆಯ ಎಸ್.ಡಿ.ಎಂ.ಸಿ.ಮಾಜಿ ಅಧ್ಯಕ್ಷ ಕೆ.ಕೆ.ಭೋಗಪ್ಪ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ನೆಲ- ಜಲ, ಅರಣ್ಯ, ಪರಿಸರ ಹಾಗೂ ಜೀವ ವೈವಿಧ್ಯ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.

ಪರಿಸರದಲ್ಲಿ ಉತ್ತಮ ಗಾಳಿ ಹಾಗೂ ಶುದ್ಧ ನೀರು ಪಡೆಯಲು ಹೆಚ್ಚು ಗಿಡ- ಮರ ಬೆಳೆಸಿದಾಗ ಭೂಮಿಯಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ, ಇಲ್ಲದಿದ್ದಲ್ಲಿ ಭವಿಷ್ಯದಲ್ಲಿ ನೀರಿನ ಸಮಸ್ಯೆ ತೀವ್ರ ಗೊಂಡು ಗಂಡಾAತರ ಸಮಸ್ಯೆ ಎದುರಿಸಬೇಕಾಗುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದರು.

ವಿಶ್ವ ಅರಣ್ಯ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪ್ರಕೃತಿ ಮೇಲೆ ಮಾನವನ ಹಸ್ತಕ್ಷೇಪದಿಂದ ಇಂದು ಜೀವ ವೈವಿಧ್ಯ ದಿನೇ ದಿನೇ ಕ್ಷೀಣಿಸುತ್ತಿದೆ.ಈ ದಿಸೆಯಲ್ಲಿ ನಾವು ಉತ್ತಮ ಭವಿಷ್ಯತ್ತಿಗಾಗಿ ನೆಲ-ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಲು ಪಣ ತೊಡಬೇಕಿದೆ ಎಂದರು.

ಶಿಕ್ಷಕಿ ಎಸ್.ಎಂ. ಗೀತಾ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂಬAಧಿಸಿದAತೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಡಿ.ಎಸ್. ಅನ್ಸಿಲಾ ರೇಖಾ, ಅನಿತಾಕುಮಾರಿ, ಸಿಬ್ಬಂದಿ ಉಷಾ ಇದ್ದರು.

ಶಿಕ್ಷಕಿ ಡಿ.ಎಸ್.ಅನ್ಸಿಲಾ ರೇಖಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಗೋಪಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕಿ ಅನಿತಾಕುಮಾರಿ ವಂದಿಸಿದರು.

ವಿದ್ಯಾರ್ಥಿಗಳು ಪರಿಸರ ಘೋಷಣೆಗಳುಳ್ಳ ಪ್ರಚಾರ ಫಲಕಗಳನ್ನು ಹಿಡಿದು ಜನರಲ್ಲಿ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಪರಿಸರ ಜಾಥಾ ನಡೆಸಿದರು.

ಅರಣ್ಯ, ವನ್ಯಜೀವಿಗಳು, ಪರಿಸರ, ಜೀವಿ ವೈವಿಧ್ಯ, ಜಲ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟçದ ಸಂಪತ್ತು, ಅರಣ್ಯಗಳು ಆಮ್ಲಜನಕದ ಕಣಜಗಳು, ಕಾಡು ಬೆಳೆಸಿ ನಾಡು ಉಳಿಸಿ ಇತ್ಯಾದಿ ಪರಿಸರ ಘೋಷಣೆಗಳನ್ನು ಹಾಕುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದರು.