ಕೂಡಿಗೆ, ಮಾ. ೨೧: ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಬೆಂಗಳೂರು ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಪದಾಧಿಕಾರಿಗಳ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ. ವಿಶೇಷ ತರಬೇತಿ ಕಾರ್ಯಾಗಾರವು ತಾ.೨೩ ರಂದು ಕೂಡ್ಲೂರು ವೀರಭೂಮಿ ಪ್ರವಾಸಿ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ ನಿರ್ದೇಶಕ. ಎ. ಮಂಜು ನೆರವೇರಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಎ.ಕೆ. ಮುನುಮುತ್ತಪ್ಪನವರು ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ರಾಜ್ಯ ಸಹಕಾರ ಮಹಾಮಂಡಲದ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಅರುಣ್ ಕುಮಾರ್ ಅಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕರಾದ ರಾಜಶೇಖರ ಜೈನ್, ತಿಮ್ಮರಾಯಿಗೌಡ, ಮತ್ತು ಮೈಸೂರು ವಿಭಾಗದ ಸಹಕಾರ ಸಂಘಗಳ ಜಿಂಟಿ ನಿರ್ದೇಶಕ ಪ್ರಕಾಶ್ ರಾವ್ ಮಹಾಮಂಡಲದ ಕಾರ್ಯದರ್ಶಿ ಲಕ್ಮಿ ಪತಯ್ಯ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಬಿ.ಕೆ. ಸಲೀಂ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇಂದ್ರ ನಾಯಕ್ ತಿಳಿಸಿದ್ದಾರೆ.