ಮಡಿಕೇರಿ, ಮಾ. ೨೧: ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನಾರೋಗ್ಯ ಸಂಸ್ಥೆ, ಎಪಿಡೀಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆ ಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆಯಡಿಯಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

೨೧ ರಿಂದ ೩೫ ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ, ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಆಸಕ್ತಿ ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ, ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳು ಮತ್ತು ಅಂಕಪಟ್ಟಿಗಳನ್ನು ತಾ. ೨೨ ರೊಳಗೆ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಕೊಡಗು ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೨೭೨-೨೨೫೯೮೫, ವೆಂಕೋಬ ಕ್ಷೇತ್ರ ಸಂಪರ್ಕ ಅಧಿಕಾರಿ, ಯುವ ಸ್ಪಂದನ ಕಾರ್ಯಕ್ರಮ. ಮೊ. ೯೬೧೧೦೬೯೯೭೩ ಹಾಗೂ ಹರ್ಷಿತಾ ಎಂ. ಯುವ ಸಮಾಲೋಚಕರು, ಮೊ. ೭೭೬೦೯೧೧೨೫೦ ರವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.