ಸೋಮವಾರಪೇಟೆ,ಮಾ.೨೧: ಸಮೀಪದ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲಾರೆ ಪರಿಶಿಷ್ಟ ಪಂಗಡ ಕಾಲೊನಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ. ೧೦ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಂಕ್ರಿಟ್ ರಸ್ತೆ ನಿರ್ಮಾಣವಾದ ಒಂದೇ ದಿನದಲ್ಲಿ ಬಿರುಕು ಬಿಟ್ಟಿದೆ ಎಂದು ಕಾಲೋನಿ ನಿವಾಸಿಗಳು ಆರೋಪಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ನಿರ್ಮಾಣವಾದ ಒಂದೇ ದಿನದಲ್ಲಿ ಕಾಂಕ್ರೀಟ್ ರಸ್ತೆಯ ಹಲವು ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದರಿAದ ಗ್ರಾಮಸ್ಥರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡು, ಸಂಪೂರ್ಣವಾಗಿ ನಿರ್ಮಾಣವಾದ ಕಾಂಕ್ರಿಟ್ ರಸ್ತೆಯನ್ನು ತೆಗೆದು, ನೂತನ ರಸ್ತೆ ಮರು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.
ಆರ್ಎಂಸಿ ಕಾಂಕ್ರಿಟ್ ತುಂಬಿಸಿಕೊAಡು ಬಂದ ಸುಮಾರು ೮ ಲಾರಿಗಳನ್ನು ಸ್ಥಳದಿಂದ ವಾಪಾಸು ಕಳಿಹಿಸುವ ಮೂಲಕ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಒತ್ತಾಯಿಸಿದರು. ಸೋಮವಾರದಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮೋಹನ್ಕುಮಾರ್ ಸ್ಥಳಕ್ಕೆ ಬಂದು ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಶಾಂತಳ್ಳಿ ಗ್ರಾ.ಪಂ. ಮಾಜೀ ಅಧ್ಯಕ್ಷ ಬಗ್ಗನ ಅನಿಲ್ಕುಮಾರ್, ಗ್ರಾಮಸ್ಥರುಗಳಾದ ಗುರುಪ್ರಸಾದ್, ದಿವ್ಯ ಕುಮಾರ್, ನಂದೀಶ್ ಚೆಂಗಪ್ಪ, ಮಧು, ಜ್ಞಾನೇಶ್ ಸೇರಿದಂತೆ ಇತರರು ಹಾಜರಿದ್ದರು.