ಚೆಯ್ಯಂಡಾಣೆ, ಮಾ. ೨೧: ಚೆಯ್ಯಂಡಾಣೆಯ ಸ್ಥಳೀಯ ಪ್ರಾಥಮಿಕ ಅರೋಗ್ಯ ಕೇಂದ್ರದ ಮುಂಭಾಗದಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಸಹಯೋಗದಲ್ಲಿ ಮಲೆ ಕುಡಿಯರ ಜಾನಪದ ಸಾಂಸ್ಕೃತಿಕ ಕಲಾ ತಂಡದ ವತಿಯಿಂದ ರಾಷ್ಟಿçÃಯ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬAಧಿತ ಪಾಶ್ವವಾಯು ಹಾಗೂ ಕಾನ್ಸರ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು ಬೀದಿನಾಟಕವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಕನಕಾವತಿ ಉದ್ಘಾಟಿಸಿದರು.