ಮಡಿಕೇರಿ, ಮಾ. ೨೧: ವಿದ್ಯಾರ್ಥಿ ನಿಲಯಗಳಲ್ಲಿ ಶುಚಿತ್ವವನ್ನು ಕಾಪಾಡ ಬೇಕು ಮತ್ತು ಆರೋಗ್ಯವರ್ಧಕ ಊಟ, ಉಪಹಾರವನ್ನು ನೀಡ ಬೇಕೆಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕವಿತಾ ಪ್ರಭಾಕರ್ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಡಿಕೇರಿಯ ಮೆಟ್ರಿಕ್ ನಂತರ ಮತ್ತು ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು ಅವ್ಯವಸ್ಥೆಗಳನ್ನು ಸರಿಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ಆರೋಗ್ಯದ ಕಡೆ ಗಮನ ಹರಿಸಬೇಕು. ಊಟ, ಉಪಹಾರದ ಮೆನು ಚಾರ್ಟ್ನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವಂತೆ ತಿಳಿಸಿದ ಅವರು, ತಾವು ಕೂಡ ಈ ಬಗ್ಗೆ ಅಧಿಕಾರಿಗಳೊಂದಿಗೆ ಸಮಾ ಲೋಚನೆ ನಡೆಸುವುದಾಗಿ ಹೇಳಿದರು. ಕೆಲವು ವಿದ್ಯಾರ್ಥಿ ನಿಲಯಗಳಲ್ಲಿ ದುರಸ್ತಿ ಕಾರ್ಯಗಳು ಬಾಕಿ ಉಳಿದಿದ್ದು, ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.

ಹಾಸ್ಟೆಲ್ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿ ಗಳೊಂದಿಗೆ ಚರ್ಚಿಸಿದ ಕವಿತಾ ಪ್ರಭಾಕರ್, ಸತತ ಅಭ್ಯಾಸದ ಮೂಲಕ ಶೈಕ್ಷಣಿಕ ಗುರಿ ಸಾಧಿಸುವಂತೆ ಹೇಳಿದರು. ಭೇಟಿ ಸಂದರ್ಭ ಜಿ.ಪಂ ಸದಸ್ಯರಾದ ಪದ್ಮಾವತಿ ಹಾಗೂ ತಾಲೂಕು ಅಧಿಕಾರಿಗಳು ಹಾಜರಿದ್ದರು.