ಮಡಿಕೇರಿ, ಮಾ. ೨೨: ತಾ. ೨೩ ಹಾಗೂ ೨೪ರಂದು ವೀರಾಜಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಸೇರುವ ಚೇಲಾವರ, ನರಿಯಂದಡ ಹಾಗೂ ಕೋಕೇರಿ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಗ್ರಾಮಸ್ಥರ ಕೋರಿಕೆಯ ಮೇರೆಗೆ ಕಾಡಿಗೆ ಓಡಿಸುವ ಕಾರ್ಯ ಕೈಗೊಂಡಿದ್ದು, ಈ ದಿನಾಂಕಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಕರಡ, ಮರಂದೋಡ, ಪೋದವಾಡ ಗ್ರಾಮದ ಗ್ರಾಮಸ್ಥರು ಎಚ್ಚರಿಕೆ ವಹಿಸಿಕೊಳ್ಳಬೇಕೆಂದು ಇಲಾಖೆಯ ಪ್ರಕಟಣೆ ತಿಳಿಸಿದೆ.