ಶನಿವಾರಸಂತೆ, ಮಾ. ೨೨: ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸವಿರುವುದರಿಂದ ತಾ. ೨೪ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ೬೬/೧೧ ಕೆ.ವಿ. ಶನಿವಾರಸಂತೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಾಲಪುರ, ಗೌಡಳ್ಳಿ, ನಿಡ್ತ, ಅಂಕನಹಳ್ಳಿ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.