ಮಡಿಕೇರಿ, ಮಾ. ೨೨: ಹಿರಿಯ ನಾಗರಿಕರ ವೇದಿಕೆಯ ಸದಸ್ಯರಿಗೆ ಮತ್ತು ಸಾರ್ವಜನಿಕರಿಗೆ ನೇತ್ರ ತಪಾಸಣಾ ಉಚಿತ ಶಿಬಿರವು ತಾ. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ರೋಟರಿ ಹಾಲ್‌ನಲ್ಲಿ ನಡೆಯಲಿದೆ. ಮಡಿಕೇರಿ ಖ್ಯಾತ ನೇತ್ರ ತಜ್ಞ ಡಾ. ಪ್ರಶಾಂತ್ ಕುಮಾರ್ ಅವರು ಕಣ್ಣು ತಪಾಸಣೆ ನಡೆಸಲಿದ್ದಾರೆ ಎಂದು ಹಿರಿಯ ನಾಗರಿಕರ ವೇದಿಕೆಯ ಕಾರ್ಯದರ್ಶಿ ಪಿ.ಎಸ್. ಅರವಿಂದ ತಿಳಿಸಿದ್ದಾರೆ.

ಹಿರಿಯ ನಾಗರಿಕರ ವೇದಿಕೆಯ ಸಭೆ

ಮಡಿಕೇರಿ, ಮಾ. ೨೨: ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕೊಂಗಾAಡ ಎ.ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಏ. ೩ ರಂದು ಬೆಳಿಗ್ಗೆ ೧೦ ಗಂಟೆಗೆ ಕಡಗದಾಳು ರಸ್ತೆಯ ಕ್ಯಾಪಿಟಲ್ ವಿಲೇಜ್‌ನಲ್ಲಿ ೨೦೨೦-೨೧ ನೇ ಸಾಲಿನ ಹಿರಿಯ ನಾಗರಿಕರ ವೇದಿಕೆಯ ಸಾಮಾನ್ಯ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಚಾರುಲತ ಸೋಮಲ್, ಡಾ. ಮನೋಹರ್ ಜಿ.ಪಾಟ್ಕರ್ ಇತರರು ಪಾಲ್ಗೊಳ್ಳಲಿದ್ದಾರೆ.