ಸಿದ್ದಾಪುರ, ಮಾ. ೨೨: ಒಂಟಿ ಸಲಗವೊಂದು ರಾತ್ರಿ ಮನೆ ಮೇಲೆ ದಾಳಿ ನಡೆಸಲು ಯತ್ನಿಸಿದ ಸಂದರ್ಭ ಪತಿ ಹಾಗೂ ಪತ್ನಿ ಕೂದಲೆಳೆಯ ಅಂತರದಿAದ ಪಾರಾದ ಘಟನೆ ಚೆನ್ನಂಗಿ ಗ್ರಾಮದ ಬಸವನಹಳ್ಳಿ ಹಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಸವನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದು, ಮನೆಗಳನ್ನು ಹಾಗೂ ಪೀಠೋಪಕರಣಗಳನ್ನು ನಾಶಪಡಿಸುತ್ತಿವೆ. ಭಾನುವಾರದಂದು ಹಾಡಿಯ ನಿವಾಸಿ ಅಪ್ಪಯ್ಯ ಮತ್ತು ಅವರ ಪತ್ನಿ ಭಾರತಿ ರಾತ್ರಿ ಮನೆಯಲ್ಲಿ ಅಡುಗೆ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಒಂಟಿ ಸಲಗ ಒಂದು ಹಠಾತ್ತನೆ ಮನೆಯ ಮೇಲೆ ದಾಳಿ ನಡೆಸಲು ಮುಂದಾಗಿದೆ. ಈ ಸಿದ್ದಾಪುರ, ಮಾ. ೨೨: ಒಂಟಿ ಸಲಗವೊಂದು ರಾತ್ರಿ ಮನೆ ಮೇಲೆ ದಾಳಿ ನಡೆಸಲು ಯತ್ನಿಸಿದ ಸಂದರ್ಭ ಪತಿ ಹಾಗೂ ಪತ್ನಿ ಕೂದಲೆಳೆಯ ಅಂತರದಿAದ ಪಾರಾದ ಘಟನೆ ಚೆನ್ನಂಗಿ ಗ್ರಾಮದ ಬಸವನಹಳ್ಳಿ ಹಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಸವನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದು, ಮನೆಗಳನ್ನು ಹಾಗೂ ಪೀಠೋಪಕರಣಗಳನ್ನು ನಾಶಪಡಿಸುತ್ತಿವೆ. ಭಾನುವಾರದಂದು ಹಾಡಿಯ ನಿವಾಸಿ ಅಪ್ಪಯ್ಯ ಮತ್ತು ಅವರ ಪತ್ನಿ ಭಾರತಿ ರಾತ್ರಿ ಮನೆಯಲ್ಲಿ ಅಡುಗೆ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಒಂಟಿ ಸಲಗ ಒಂದು ಹಠಾತ್ತನೆ ಮನೆಯ ಮೇಲೆ ದಾಳಿ ನಡೆಸಲು ಮುಂದಾಗಿದೆ. ಈ ಸಾಕಾನೆ ಶಿಬಿರಕ್ಕೆ ತೆರಳಿವೆ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಕಾಡಾನೆಗಳು ಯಾವುದೇ ಭಯವಿಲ್ಲದೆ ಹಾಡಿಗಳ ಮನೆಗಳತ್ತ ಧಾವಿಸುತ್ತಿದೆ ಎಂದು ಅಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ. ಕಾಡಾನೆಗಳ ಉಪಟಳದಿಂದಾಗಿ ನೆಮ್ಮದಿ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕೂಡಲೇ ಬಸವ£ಹಳ್ಳಿ ಹಾಡಿಯಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಹಾಗೂ ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಆದಿವಾಸಿ ಹೋರಾಟಗಾರ್ತಿ ಜೆ.ಕೆ. ಮುತ್ತಮ್ಮ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ ತಪ್ಪಿದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

-ವರದಿ ವಾಸು