ಮಡಿಕೇರಿ, ಮಾ. ೨೨: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಅರೆಭಾಷಿಕ ವಧು-ವರರ ಸಮಾವೇಶ ಏ. ೪ ರಂದು ಮಡಿಕೇರಿಯ ಕೊಡಗು ಗೌಡ ವಿದ್ಯಾ ಸಂಘದÀ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತೀ ವರ್ಷದಂತೆ ಈ ಬಾರಿಯೂ ಅರೆಭಾಷಿಕ ಗೌಡ ಜನಾಂಗದ ವಧು-ವರರ ಸಮಾವೇಶವನ್ನು ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಏ.೪ ರಂದು ಭಾನುವಾರ ಬೆಳಗ್ಗೆ ೯.೩೦ ಗಂಟೆಗೆ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ : ೯೬೬೩೭ ೨೫೧೫೨, ೯೯೦೦೫ ೦೦೦೮೦, ೯೭೩೯೪ ೯೫೩೮೧ನ್ನು ಸಂಪರ್ಕಿಸಬಹುದಾಗಿದೆ.