
ಮಡಿಕೇರಿ, ಮಾ. ೨೩: ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು, ಅಂತರ ಕಾಯ್ದು ಕೊಳ್ಳಬೇಕು. ಕೋವಿಡ್-೧೯ ಸಂಬAಧ ನಿಯಮ ಪಾಲಿಸದಿರುವುದು ಕಂಡುಬAದಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಸಂಬAಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-೧೯(ಮೊದಲ ಪುಟದಿಂದ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸಬೇಕು. ಆ ನಿಟ್ಟಿನಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಯಾವುದೇ ರೀತಿಯ ನಕಲಿ ಕೋವಿಡ್ ಪ್ರಮಾಣ ಪತ್ರ ಕಂಡು ಬಂದಲ್ಲಿ ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅವರ ಮೇಲೆ ದಂಡ ಹೇರಬೇಕು. ಚೆಕ್ ಪೋಸ್ಟ್ಗಳಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಬೇಕು. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರು ಸಹಕಾರ ನೀಡದಿದ್ದರೆ ಅಂತವರ ವಿರುದ್ದ ಸಂಬAಧಪಟ್ಟ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗಡಿಯಲ್ಲಿ ಎಚ್ಚರಿಕೆ ವಹಿಸಿ
ಜಿಲ್ಲೆಯ ಕರಿಕೆ, ಮಾಕುಟ್ಟ ಮತ್ತು ಕುಟ್ಟ ಚೆಕ್ ಪೋಸ್ಟ್ಗಳಲ್ಲಿ ಇನ್ನಷ್ಟು ಎಚ್ಚರ ವಹಿಸಬೇಕು. ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ನಿಯಂತ್ರಣ ಸಂಬAಧ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಚಾರುಲತ ಸೋಮಲ್ ನಿರ್ದೇಶನ ನೀಡಿದರು. ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವುದು ಮತ್ತಿತರ ನಿಯಂತ್ರಣ ಚಟುವಟಿಟಕೆಗಳಲ್ಲಿ ಸಾರ್ವಜನಿಕರು ಸಹಕರಿಸಬೇಕು.
ಈಗಾಗಲೇ ಚಾಲ್ತಿಯಲ್ಲಿರುವಂತೆ, ಕೇರಳ ಹಾಗೂ ಮಹಾರಾಷ್ಟçಗಳಿಂದ ಬರುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಹಾಗೂ ಜಿಲ್ಲೆಯ ಗಡಿ ಭಾಗಗಳಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯ ಪರಿಶೀಲನೆಯನ್ನು ತೀವ್ರಗೊಳಿಸಲು ಸೂಚಿಸಿದರು.
ಮಾರ್ಗಸೂಚಿ ಪಾಲನೆ ಕಡ್ಡಾಯ
ವಿವಿಧ ಸಮಾರಂಭಗಳು ಹಾಗೂ ಆಚರಣೆಗಳ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯ ಹೆಚ್ಚಿದೆ. ಆದ್ದರಿಂದ ಭಾರತ ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಆಚರಣೆಗಳು, ಸಮಾರಂಭಗಳಲ್ಲಿ ಪ್ರತಿ ವ್ಯಕ್ತಿಯು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಚಾರುಲತ ಸೋಮಲ್ ಹೇಳಿದರು.
ಹೋಂ ಸ್ಟೇ, ಸಂತೆ, ಸಮಾರಂಭ ಸಮಾರೋಪಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳಗಳಲ್ಲಿ ಅತಿ ಹೆಚ್ಚಾಗಿ ಅಂತರ ಕಾಪಾಡಿಕೊಳ್ಳಬೇಕು ಮತ್ತು ಪೊಲೀಸರು ಇಂತಹ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತವಾದ ಕ್ರಮ ಕೈಗೊಳ್ಳಬೇಕು. ಹೆಚ್ಚು ಪ್ರಕರಣಗಳು ಕಂಡುಬAದಲ್ಲಿ ತಕ್ಷಣವೇ ಪ್ರಾಥಮಿಕ ಸಂಪರ್ಕದಲ್ಲಿರುವವರ ಮಾಹಿತಿ ಪಡೆಯಬೇಕು. ಪ್ರಕರಣಗಳು ಹೆಚ್ಚಾಗಲು ಕಾರಣದ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.
ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ಗಮನ ಹರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರ್ಕಾರದ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ತಪ್ಪಿದಲ್ಲಿ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲನೆ, ಕೋವಿಡ್ ಪರೀಕ್ಷೆಗೆ ಒಳಪಡುವುದು ಹಾಗೂ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಹ ಅಗತ್ಯ ಸಂದೇಶಗಳನ್ನು ಸಾರ್ವಜನಿಕರಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಕೇರ್ ಕೇಂದ್ರಗಳಲ್ಲಿ ಸಿಬ್ಬಂದಿಗಳ ಅಭಾವವಿದ್ದರೆ ಕೂಡಲೇ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮಾತನಾಡಿ, ಕೋವಿಡ್ ನಿಯಂತ್ರಣ ಸಂಬAಧ ಪೊಲೀಸ್ ಇಲಾಖೆ ಅಗತ್ಯ ಮುನ್ನಚ್ಚರಿಕೆ ಕ್ರಮ ಕೈಗೊಂಡಿದ್ದು ಎಲ್ಲಾ ಇಲಾಖೆಗಳ ಜೊತೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.
ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಕೋವಿಡ್ ಸಂಬAಧ ಹೆಚ್ಚಿನ ಅರಿವು ಮೂಡಿಸಲಾಗುವುದು, ತಾ.ಪಂ. ಇಒ ಮತ್ತು ಗ್ರಾ.ಪಂ. ಪಿಡಿಒಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಮೋಹನ್ ಅವರು ಕೋವಿಡ್ ಹೆಚ್ಚಳದ ಸಂಬAಧ ಹಲವು ಮಾಹಿತಿ ನೀಡಿದರು. ಡಾ.ಮಹೇಶ್, ಡಾ.ರೂಪೇಶ್, ಯೋಗಾನಂದ ಅವರು ಹಲವು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್, ಆರ್‌ಸಿಎಚ್ ಅಧಿಕಾರಿ ಡಾ. ಗೋಪಿನಾಥ, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಇತರರು ಇದ್ದರು.