ಪಾಲಿಬೆಟ್ಟ, ಮಾ. ೨೩: ಪಾಲಿಬೆಟ್ಟ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಮಾತನಾಡಿ ಸರ್ಕಾರ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವಾರು ಯೋಜನೆಗಳನ್ನು ನೀಡುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಶಿಕ್ಷಣದೊಂದಿಗೆ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡು ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದರು. ರೂ. ೯೬ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೆೆÆಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ವಿಜು ಸುಬ್ರಮಣಿ, ತಾಲೂಕು ಪಂಚಾಯಿತಿ ಸದಸ್ಯ ಅಜಿತ್ ಕರುಂಬಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಪಂಚಾಯಿತಿ ಉಪಾಧ್ಯಕ್ಷ ಮಾಳೇಟಿರ ಪವಿತ್ರ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಹಾಲಿಂಗಯ್ಯ, ಶೈನಾ, ಉಪನ್ಯಾಸಕರುಗಳಾದ ಶಿವದಾಸ್, ಪಾರ್ವತಿ, ಮೇಘನಾ, ಸುನೀತಾ, ರಂಗಸ್ವಾಮಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ್, ಅಭಿಯಂತರರಾದ ಸುರೇಶ್, ಸುಬ್ಬಯ್ಯ ಹಾಜರಿದ್ದರು.
ವರದಿ: ಪುತ್ತಂ ಪ್ರದೀಪ್