ಸಿದ್ದಾಪುರ, ಮಾ. ೨೩: ಜಿಲ್ಲೆಯಲ್ಲಿ ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಸಿಪಿಐ (ಎಂ) ಪಕ್ಷದ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಿಪಿಐ(ಎಂ) ಪಕ್ಷದ ಮುಖಂಡ ಡಾ. ಐ.ಆರ್. ದುರ್ಗಾಪ್ರಸಾದ್ ಜಿಲ್ಲೆಯಲ್ಲಿ ಕಳೆದ ಸುಮಾರು ವರ್ಷಗಳಿಂದ ವನ್ಯಜೀವಿಗಳಾದ ಆನೆ ಹಾಗೂ ಹುಲಿಗಳ ಉಪಟಳ ತೀವ್ರವಾಗಿದ್ದು, ಸರ್ಕಾರವು ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ರೀತಿಯ ಆಸಕ್ತಿ ಮುಖಂಡ ಡಾ. ಐ.ಆರ್. ದುರ್ಗಾಪ್ರಸಾದ್ ಜಿಲ್ಲೆಯಲ್ಲಿ ಕಳೆದ ಸುಮಾರು ವರ್ಷಗಳಿಂದ ವನ್ಯಜೀವಿಗಳಾದ ಆನೆ ಹಾಗೂ ಹುಲಿಗಳ ಉಪಟಳ ತೀವ್ರವಾಗಿದ್ದು, ಸರ್ಕಾರವು ವನ್ಯಜೀವಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ರೀತಿಯ ಆಸಕ್ತಿ ಒತ್ತಾಯಿಸಿದರು.

ಕಾರ್ಮಿಕ ಮುಖಂಡ ಎನ್.ಡಿ ಕುಟ್ಟಪ್ಪ ಮಾತನಾಡಿ, ಕಾರ್ಮಿಕರಿಗೆ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಭಯದ ವಾತಾವರಣ ನಿರ್ಮಾಣವಾಗಿದೆ. ವನ್ಯಜೀವಿಗಳು ಕೃಷಿಕರು ಬೆಳೆದ ಕೃಷಿ ಫಸಲುಗಳನ್ನು ನಾಶ ಮಾಡುತ್ತಿದ್ದು, ಮಾನವನನ್ನು ಕೂಡ ಹತ್ಯೆ ಮಾಡುತ್ತಿದೆ. ಇಷ್ಟಾದರೂ ಕೂಡ ಸರ್ಕಾರವು ಶಾಶ್ವತ ಯೋಜನೆಯನ್ನು ರೂಪಿಸದೇ ನಿರ್ಲಕ್ಷö್ಯ ವಹಿಸುತ್ತಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಪಕ್ಷದ ಪದಾಧಿಕಾರಿಗಳಾದ ಹೆಚ್.ಬಿ ರಮೇಶ್, ಎನ್.ಕೆ. ಅನಿಲ್, ಸಿ.ಯು. ಮುಸ್ತಫಾ, ಅಬ್ದುಲ್ ರಹೀಮ್, ವೈಜು, ಇನ್ನಿತರರು ಹಾಜರಿದ್ದರು.