ಗೋಣಿಕೊಪ್ಪ ವರದಿ: ಪೊನ್ನಂಪೇಟೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸರ್ವದೈವತಾ ವಿದ್ಯಾಸಂಸ್ಥೆ ಸಹಯೋಗದಲ್ಲಿ ರ‍್ವತೋಕ್ಲು ಸರ್ವಧೈವತಾ ವಿದ್ಯಾಸಂಸ್ಥೆ ಆವರಣದಲ್ಲಿ ಮಂಗಳವಾರ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಸ್ಕೌಟ್ ಮತ್ತು ಗೈಡ್ಸ್ ಕ್ಷೇತ್ರದಿಂದ ಮೀನಾಕ್ಷಿ, ಆಡಳಿತ ಕ್ಷೇತ್ರದಿಂದ ಸರ್ವದೈವತಾ ಕಾಲೇಜು ಪ್ರಾಂಶುಪಾಲೆ ಕಾಡ್ಯಮಾಡ ಲಲಿತಾ ಮೊಣ್ಣಪ್ಪ, ಶಿಕ್ಷಣದಲ್ಲಿ ಸಜನಿ ಸೋಮಯ್ಯ ಅವರುಗಳನ್ನು ಸನ್ಮಾನಿಸಲಾಯಿತು.
ವಿವಿಧ ಕ್ರೀಡಾಕೂಟ ನಡೆಸಲಾಯಿತು. ತಾಲೂಕು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ, ಸರ್ವದೈವತಾ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ, ಮುಖ್ಯ ಶಿಕ್ಷಕ ಪೊನ್ನಿಮಾಡ ಪ್ರದೀಪ್, ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಜೆಮ್ಮಿ ಸಿಕ್ವೆರಾ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜ್ಯೋತೀಶ್ವರಿ, ಪ್ರಮುಖರಾದ ಅಲಿಮಾ, ಒಮನ ಇದ್ದರು.ಸೋಮವಾರಪೇಟೆ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಪಟ್ಟಣದ ವೆಂಕಟೇಶ್ವರ ಬ್ಲಾಕಿನ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ, ಪೋಷಣ್ ಅಭಿಯಾನ, ಮಕ್ಕಳಿಗೆ ಅನ್ನಪ್ರಾಶನ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಸದಸ್ಯರಾದ ಪಿ.ಕೆ. ಚಂದ್ರು, ಬಿ.ಆರ್. ಮಹೇಶ್, ಇಲಾಖೆಯ ಮಹಿಳಾ ಮೇಲ್ವಿಚಾರಕಿ ಗುರುಬಸಮ್ಮ, ಆರೋಗ್ಯ ಕಾರ್ಯಕರ್ತೆ ಅನಿತ ಅವರುಗಳು ಭಾಗವಹಿಸಿದ್ದರು.
ಪೋಷಣ್ ಅಭಿಯಾನ ಕಾರ್ಯಕ್ರಮದಡಿ ೬ ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ನಡೆಯಿತು. ೩ ವರ್ಷ ಮೇಲ್ಪಟ್ಟ ಮಕ್ಕಳಿಗೆ ಪುರೋಹಿತರಾದ ಮೋಹನ್‌ಮೂರ್ತಿ ಶಾಸ್ತಿç ಅವರ ನೇತೃತ್ವದಲ್ಲಿ ಅಕ್ಷರಾಭ್ಯಾಸ ನೆರವೇರಿತು.
ಇದರೊಂದಿಗೆ ಇಲಾಖೆಯಿಂದ ಗರ್ಭಿಣಿ ಸ್ತಿçÃಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕಾರ್ಯಕರ್ತೆ ಜೆನಿಫರ್ ತಾರಾ ಲೋಬೋ, ಸಹಾಯಕಿ ಹೆಚ್.ಆರ್. ರೇಣುಕ, ಕಾರ್ಯಕರ್ತೆಯರಾದ ಹೆಚ್.ಜಿ. ಉಷಾ, ಜಗದಾಂಬ ಅವರುಗಳು ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಪ.ಪಂ. ಮಾಜಿ ಸದಸ್ಯೆ ಮೀನಾಕುಮಾರಿ ಅವರನ್ನು ಸನ್ಮಾನಿಸಲಾಯಿತು.ಮಡಿಕೇರಿ: ಮಡಿಕೇರಿಯ ಕೋಟೆ ಮಹಿಳಾ ಸಮಾಜದಲ್ಲಿ ಇತ್ತೀಚೆಗೆ ಪ್ರೇಮ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಸ್ತೂರಿ ಗೋವಿಂದಮಯ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭಾರತಿ ರಮೇಶ್ ಪ್ರಾರ್ಥಿಸಿದರು. ಅರವಿಂದ ಅಣ್ಣಪ್ಪ ವಂದಿಸಿದರು. ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ವೀರಾಜಪೇಟೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಮಿತಿ ವತಿಯಿಂದ ಮಹಿಳಾ ದಿನಾಚರಣೆ ಆಚರಿಸಲಾಯಿತು.
ವೀರಾಜಪೇಟೆ ಕೂರ್ಗ್ ವ್ಯಾಲಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ ಕಾರ್ಯಕ್ರಮ ಉದ್ಘಾಟಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಳೀಯ ಸಮಿತಿ ಅಧ್ಯಕ್ಷ ಕೂತಂಡ ಸಚಿನ್ ಕುಟ್ಟಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೆ.ಸಿ. ಗೀತಾಂಜಲಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಕಾವೇರಿ ಮಹಿಳಾ ಕಾಲೇಜು ಪ್ರಾಂಶುಪಾಲೆ ಡಾ. ಎಂ.ಆರ್. ಪೂವಮ್ಮ, ಕ್ಷೇತ್ರ ಶಿಕ್ಷಣ ಅಧೀಕ್ಷಕಿ ಪಿ.ಜಿ. ಪೊನ್ನಮ್ಮ, ಅಂರ‍್ರಾಷ್ಟಿçÃಯ ಕ್ರೀಡಾಪಟು ಎಂ.ಪಿ. ಹೊನ್ನಮ್ಮ, ಕೂರ್ಗ್ ವ್ಯಾಲಿ ಶಾಲೆಯ ಆಡಳಿತಾಧಿಕಾರಿ ಸುಮಾ ಚಿತ್ರಭಾನು, ಸ್ಥಳೀಯ ಸಮಿತಿಯ ಕಾರ್ಯದರ್ಶಿ ನಳಿನಾಕ್ಷಿ, ಸಹ ಕಾರ್ಯದರ್ಶಿ ಬಿ.ಬಿ. ಜಾಜಿ, ಮುಖ್ಯ ಶಿಕ್ಷಕ ಮಹದೇವಸ್ವಾಮಿ, ನಾಟ್ಯ ಮಯೂರಿ ನೃತ್ಯ ಶಾಲೆಯ ಪ್ರೇಮಾಂಜಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.