ಸಿದ್ದಾಪುರ, ಮಾ. ೨೫: ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿದ್ದ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಬಜೆಗೊಲ್ಲಿಯ ಕಾಮಧೇನು ಕಾಫಿ ತೋಟದಲ್ಲಿ ಬುಧವಾರದಂದು ಕಾರ್ಮಿಕರಾದ ಸುಧಾಕರ್ (೭೩) ಹಾಗೂ ಮೊಹಮ್ಮದ್ (೪೦) ಎಂಬಿಬ್ಬರ ಮೇಲೆ ಕಾಫಿ ತೋಟದಲ್ಲಿ ಕಾಡಾನೆಗಳು ದಾಳಿ ನಡೆಸಿತ್ತು.ಸೊಂಡಿಲಿನಿAದ ಎತ್ತಿ ಬಿಸಾಡಿದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಧಾಕರ್ ಅವರಿಗೆ ಗಂಭೀರ ಸ್ವರೂಪದ ಗಾಯ ಆದ ಹಿನ್ನೆಲೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾಡಾನೆ ದಾಳಿಗೆ ಸಿಲುಕಿದ ಸುಧಾಕರ್ ಅವರ ಎದೆಗೆ ತೀವ್ರ ಸ್ವರೂಪದ ಗಾಯವಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರದಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.

ಮೃತ ಸುಧಾಕರ್ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಕೂಡುಗದ್ದೆಯಲ್ಲಿ ತನ್ನ ಪುತ್ರಿಯೊಂದಿಗೆ ವಾಸ ಮಾಡಿಕೊಂಡಿದ್ದರು. ಇವರ ಪತ್ನಿ ಅನಾರೋಗ್ಯದಿಂದ ಕಳೆದ ೪ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಓರ್ವ ಪುತ್ರ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಕಾಡಾನೆ ದಾಳಿ ಪ್ರಕರಣ ಸಂಬAಧಿಸಿದAತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಸುಧಾಕರ್ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ನಡೆಸಲಾಯಿತು. ನಂತರ ರಾತ್ರಿ ಮೃತದೇಹವನ್ನು ಕೂಡುಗದ್ದೆಗೆ ತರಲಾಗಿದ್ದು, ಅಂತ್ಯಕ್ರಿಯೆ ತಾ. ೨೬ ರಂದು (ಇಂದು) ನಡೆಯಲಿದೆ.

ಅರಣ್ಯ ಇಲಾಖೆಯಿಂದ ಪರಿಹಾರ: ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಸುಧಾಕರ್ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತುರ್ತು ಪರಿಹಾರವಾಗಿ ರೂ. ೨ ಲಕ್ಷದ ಚೆಕ್ಕನ್ನು ತಿತಿಮತಿ ವಲಯ ಅರಣ್ಯ ಅಧಿಕಾರಿ ಅಶೋಕ್ ಹಾಗೂ ಉಪವಲಯಾರಣ್ಯಾಧಿಕಾರಿ ಶ್ರೀನಿವಾಸ್ ಕುಟುಂಬಸ್ಥರಿಗೆ ವಿತರಿಸಿದರು.

ಕಾಡಾನೆ ಕಾರ್ಯಾಚರಣೆ: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಬಾಡಗ ಬಾಣಂಗಾಲ ಗ್ರಾಮದ ಬಜೆಗೊಲ್ಲಿ ತೂಬನಕೊಲ್ಲಿ ಭಾಗದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ

(ಮೊದಲ ಪುಟದಿಂದ) ಕಾಡಾನೆಗಳನ್ನು ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಕಾರ್ಯಾಚರಣೆ ನಡೆಸಿ ಅರಣ್ಯಕ್ಕೆ ಅಟ್ಟಲು ಪ್ರಯತ್ನಿಸಿದರು. ಈ ಭಾಗದಲ್ಲಿ ಮಿತಿಮೀರಿದ ಕಾಡಾನೆಗಳ ಹಾವಳಿಯಿದ್ದು, ಕಳೆದ ಕೆಲವು ದಿನಗಳ ಹಿಂದೆ ಸಿದ್ದಾಪುರ ಸಮೀಪದ ಬೀಟಿಕಾಡು ಕಾಫಿ ತೋಟದಲ್ಲಿ ಕಾಫಿ ಕಣದಲ್ಲಿ ಕಾವಲುಗಾರನಾಗಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಇದೀಗ ಮತ್ತೆ ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವುದು ಕಾರ್ಮಿಕರು ಭಯಭೀತರಾಗಿದ್ದಾರೆ. ಕಾಡಾನೆ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾರ್ಮಿಕ ಸುಧಾಕರ್ ಮೃತಪಟ್ಟ ಸುದ್ದಿ ತಿಳಿದು ಕಾಫಿ ತೋಟದ ಕಾರ್ಮಿಕರು ಕೆಲಸ ಕಾರ್ಯಗಳು ಸ್ಥಗಿತಗೊಳಿಸಿ ಸಂತಾಪ ಸೂಚಿಸಿದರು.

-ವರದಿ: ವಾಸು ಎ.ಎನ್