ಮಡಿಕೇರಿ, ಮಾ. ೨೩: ಪದ್ಮಭೂಷಣ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ೧೧೫ನೇ ಜನ್ಮದಿನಾಚರಣೆ ಕಾರ್ಯಕ್ರಮ ಈ ಬಾರಿ ಇತ್ತೀಚೆಗಷ್ಟೆ ಉದ್ಘಾಟನೆಗೊಂಡಿರುವ ‘ಸನ್ನಿಸೈಡ್’ನ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜರುಗಲಿದೆ. ಅತ್ಯಾಕರ್ಷಕವಾಗಿ ರೂಪುಗೊಂಡಿರುವ ತಿಮ್ಮಯ್ಯ ಮ್ಯೂಸಿಯಂನಲ್ಲಿ ಬೆಳಕಿನ ಆಕರ್ಷಣೆಯೊಂದಿಗೆ ಈ ವರ್ಷ ಪ್ರಥಮ ಬಾರಿಗೆ ಸಂಜೆ ವೇಳೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಾ. ೩೧ ತಿಮ್ಮಯ್ಯ ಅವರ ೧೧೫ನೇ ಜನ್ಮದಿನವಾಗಿದ್ದು, ಕೊಡವ ಸಾಹಿತ್ಯ ಅಕಾಡೆಮಿ ಮೂಲಕ ಈ ಬಾರಿಯ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಕಾಡೆಮಿಗೆ ಫೀ.ಮಾ. ಕಾರ್ಯಪ್ಪ ಹಾಗೂ

(ಮೊದಲ ಪುಟದಿಂದ) ಜನರಲ್ ತಿಮ್ಮಯ್ಯ ಫೋರಂ ಸಹಕಾರ ನೀಡುತ್ತಿದೆ. ಸಂಜೆ ೫.೩೦ ರಿಂದ ಕಾರ್ಯಕ್ರಮ ನಡೆಯಲಿರುವುದಾಗಿ ಅಕಾಡೆಮಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದು, ಇದಕ್ಕೆ ಜಿಲ್ಲಾಧಿಕಾರಿಗಳಿಂದಲೂ ಒಪ್ಪಿಗೆ ದೊರೆತಿರುವುದಾಗಿ ತಿಳಿಸಿದ್ದಾರೆ.

ಯುದ್ಧ ಸ್ಮಾರಕಕ್ಕೆ ಭೇಟಿಯೊಂದಿಗೆ ನಮನ ವಂದೇ ಮಾತರಂ ಗೀತೆ ಮ್ಯೂಸಿಯಂ ವೀಕ್ಷಣೆ, ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೊಂಗAಡ ಎಸ್. ದೇವಯ್ಯ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಫೋರಂ ಅಧ್ಯಕ್ಷ ಕರ್ನಲ್ (ಮೊದಲ ಪುಟದಿಂದ) ಜನರಲ್ ತಿಮ್ಮಯ್ಯ ಫೋರಂ ಸಹಕಾರ ನೀಡುತ್ತಿದೆ. ಸಂಜೆ ೫.೩೦ ರಿಂದ ಕಾರ್ಯಕ್ರಮ ನಡೆಯಲಿರುವುದಾಗಿ ಅಕಾಡೆಮಿ ಅಧ್ಯಕ್ಷೆ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದು, ಇದಕ್ಕೆ ಜಿಲ್ಲಾಧಿಕಾರಿಗಳಿಂದಲೂ ಒಪ್ಪಿಗೆ ದೊರೆತಿರುವುದಾಗಿ ತಿಳಿಸಿದ್ದಾರೆ.

ಯುದ್ಧ ಸ್ಮಾರಕಕ್ಕೆ ಭೇಟಿಯೊಂದಿಗೆ ನಮನ ವಂದೇ ಮಾತರಂ ಗೀತೆ ಮ್ಯೂಸಿಯಂ ವೀಕ್ಷಣೆ, ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೊಂಗAಡ ಎಸ್. ದೇವಯ್ಯ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಫೋರಂ ಅಧ್ಯಕ್ಷ ಕರ್ನಲ್ ಕಂಡ್ರತAಡ ಸಿ. ಸುಬ್ಬಯ್ಯ (ನಿ) ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭ ಜನರಲ್ ತಿಮ್ಮಯ್ಯ ಕುರಿತಾಗಿ ಡಾ. ಐಚೆಟ್ಟಿರ ಮಾ. ಮುತ್ತಣ್ಣ ಅವರು ಬರೆದಿರುವ ಪುಸ್ತಕ , ಮೊಣ್ಣಂಡ ಶೋಭಾ ಸುಬ್ಬಯ್ಯ ಅವರು ಕೊಡವ ಭಾಷೆಗೆ ತರ್ಜುಮೆ ಮಾಡಿರುವ ಪುಸ್ತಕ ಬಿಡುಗಡೆಯೂ ಜರುಗಲಿದೆ.