ಕಣಿವೆ, ಮಾ. ೨೫: ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವೇರಿ ನದಿ ದಂಡೆಯ ದೊಡ್ಡಹೊಸೂರು ಗ್ರಾಮದ ಇಮ್ರಾನ್ ಎಂಬವರಿಗೆ ಸೇರಿದ ಭತ್ತದ ಹುಲ್ಲಿನ ಮೆದೆಗೆ ವಿದ್ಯುತ್ ತಗುಲಿದ ಪರಿಣಾಮ ಸುಮಾರು ೩೦ ಸಾವಿರ ಮೌಲ್ಯದ ಭತ್ತದ ಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಸಂಭವಿಸಿದೆ.
ಹುಲ್ಲಿನ ಮೆದೆಯ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಮೆದೆಗೆ ತಾಗಿದ್ದರಿಂದ ಅಗ್ನಿ ಆಕಸ್ಮಿಕ ಸಂಭವಿಸಿದೆ. ವಿಷಯವರಿತು ಕೂಡಲೇ ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು, ಚಂದ್ರಹಾಸ, ಸಾಲ್ಯಾನ್ ನೇತೃತ್ವದಲ್ಲಿ ಬೆಂಕಿಯನ್ನು ನಂದಿಸಿದರು.