ಕೋವಿಡ್ ಪರಿಸ್ಥಿತಿ ಸುಧಾರಿಸದಿದ್ದರೆ ಪುಣೆಯಲ್ಲಿ ಕಠಿಣ ಕ್ರಮ
ಪುಣೆ, ಮಾ. ೨೬: ಪುಣೆ ಜಿಲ್ಲೆಯಲ್ಲಿ ಮುಂದಿನ ಒಂದು ವಾರದಲ್ಲಿ ಕೋವಿಡ್-೧೯ ಪರಿಸ್ಥಿತಿ ಸುಧಾರಿಸದಿದ್ದರೆ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಮಹಾರಾಷ್ಟç ಉಪಮುಖ್ಯಮಂತ್ರಿ ಅಜಿತ್ ಪವಾರ್ ಎಚ್ಚರಿಸಿದ್ದಾರೆ. ಜಿಲ್ಲೆಯ ಕೋವಿಡ್-೧೯ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಅಜಿತ್ ಪವಾರ್ ಅವರು, ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ. ಪರಿಸ್ಥಿತಿ (ಪ್ರಕರಣಗಳ ವಿಷಯದಲ್ಲಿ) ಹೀಗೆ ಮುಂದುವರೆದರೆ, ಏಪ್ರಿಲ್ ಮೊದಲ ವಾರದಲ್ಲಿ ನಾವು ಜಿಲ್ಲೆಯಲ್ಲಿ ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು. ಇದೇ ವೇಳೆ ಜನ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ದೈಹಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಕೈಗಳನ್ನು ಸಾನಿಟೈಸ್ ಮಾಡಿಕೊಳ್ಳಬೇಕು ಎಂದು ಜನರಿಗೆ ಎಚ್ಚರಿಕೆ ನೀಡಿದರು. ಮದುವೆಗಳಲ್ಲಿ ೫೦ಕ್ಕಿಂತ ಹೆಚ್ಚು ಮಂದಿ ಪಾಲ್ಗೊಳ್ಳಲು ಅವಕಾಶ ಇಲ್ಲ, ಅಂತ್ಯಕ್ರಿಯೆಯಲ್ಲಿ ೨೦ ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ, ಸಾಮಾಜಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಅವರು ಹೇಳಿದರು.
ಕೋವಿಡ್-೧೯ ಆಸ್ಪತ್ರೆಯಲ್ಲಿ ಬೆಂಕಿ ದುರಂತ
ಮುAಬೈ, ಮಾ. ೨೬: ಆಸ್ಪತ್ರೆಯಲ್ಲಿ ಬೆಂಕಿ ದುರಂತದ ಪ್ರಕರಣ ಮುಂದುವರಿದಿದೆ. ಮುಂಬೈಯ ಬಂಡುಪ್ ಪ್ರದೇಶದಲ್ಲಿರುವ ಡ್ರೀಮ್ಸ್ ಮಾಲ್‌ನಲ್ಲಿರುವ ಸನ್‌ರೈಸ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ವೇಳೆ ಬೆಂಕಿ ದುರಂತವಾಗಿದ್ದು ಮೃತಪಟ್ಟವರ ಸಂಖ್ಯೆ ೧೦ಕ್ಕೇರಿದೆ. ಕೋವಿಡ್-೧೯ ಸೋಂಕಿತರು ದಾಖಲಾಗಿರುವ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದ್ದು ಸುಮಾರು ೭೬ ರೋಗಿಗಳನ್ನು ರಕ್ಷಣೆ ಮಾಡುವ ಕಾರ್ಯ ಮುಂದುವರಿದಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ತಿಳಿಸಿದ್ದಾರೆ. ಮಾಲ್‌ವೊಂದರಲ್ಲಿ ನಡೆಸುತ್ತಿರುವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ದುರಂತವುAಟಾಗಿದ್ದು, ಸುಮಾರು ೨೩ ಅಗ್ನಿಶಾಮಕ ದಳಗಳು ಸ್ಥಳದಲ್ಲಿ ಬೆಂಕಿ ನಂದಿಸುವ, ರೋಗಿಗಳನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ಡಿಸಿಪಿ ಪ್ರಶಾಂತ್ ಕದಮ್ ತಿಳಿಸಿದ್ದಾರೆ. ಬೆಂಕಿ ಹತ್ತಿ ಉರಿಯಲು ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಲ್‌ವೊಂದರಲ್ಲಿ ಆಸ್ಪತ್ರೆ ನಡೆಸುತ್ತಿರುವುದನ್ನು ನಾನು ನೋಡುತ್ತಿರುವುದು ಇದೇ ಮೊದಲ ಸಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ೭೦ ರೋಗಿಗಳನ್ನು ಮತ್ತು ಕೋವಿಡ್ ಸೋಂಕಿತರನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಂಬೈ ಮೇಯರ್, ಮಾಲ್‌ವೊಂದರಲ್ಲಿ ಆಸ್ಪತ್ರೆ ನಡೆಸುತ್ತಿರುವುದನ್ನು ನಾನು ನೋಡುತ್ತಿರುವುದು ಇದೇ ಮೊದಲು. ಇದು ಅತ್ಯಂತ ಗಂಭೀರ ಪ್ರಕರಣ. ಏಳು ಮಂದಿ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ. ೭೦ ಮಂದಿ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದರು. ಅಗ್ನಿ ದುರಂತದಲ್ಲಿ ೧೦ ಮಂದಿ ಮೃತಪಟ್ಟಿದ್ದು, ಇದೊಂದು ಗಂಭೀರ ಪ್ರಕರಣವಾಗಿದೆ. ಆಸ್ಪತ್ರೆಯ ವ್ಯವಸ್ಥಾಪಕ ಮಂಡಳಿಯ ನಿರ್ಲಕ್ಷ್ಯತನ ಎದ್ದುಕಾಣುತ್ತಿದೆ. ಈ ಬಗ್ಗೆ ಕೇಸು ದಾಖಲಿಸುತ್ತೇವೆ ಎಂದು ಸನ್‌ರೈಸ್ ಆಸ್ಪತ್ರೆಯ ಬೆಂಕಿ ದುರಂತ ಪ್ರಕರಣ ಬಗ್ಗೆ ಮುಂಬೈ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.
ಭಾರತದ ಕೊಡುಗೆಯನ್ನು ಸದಾ ನೆನಪಿಸಿಕೊಳ್ಳುತ್ತೇವೆ : ಶೇಕ್ ಹಸೀನಾ
ಢಾಕಾ, ಮಾ. ೨೬: ಬಾಂಗ್ಲಾದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಭಾರತದ ಕೊಡುಗೆಯನ್ನು ನಾವು ಸದಾ ನೆನಪಿಸಿಕೊಳ್ಳುತ್ತೇವೆ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಹೇಳಿದ್ದಾರೆ. ಬಾಂಗ್ಲಾದೇಶದ ೫೦ನೇ ಸ್ವಾತಂತ್ರೊö್ಯÃತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಾತನಾಡಿದ ಶೇಕ್ ಹಸೀನಾ, ಭಾರತ ಇದೀಗ ನಮ್ಮ ಅತ್ಯುತ್ತಮ ಅಭಿವೃದ್ಧಿ ಪಾಲುದಾರ ರಾಷ್ಟçವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಗೌರವದ ವಿಚಾರವಾಗಿದೆ ಎಂದರು. ಶೇಕ್ ಮುಜಿಬರ್ ರೆಹಮಾನ್ ಅವರಿಗೆ ೨೦೨೦ನೇ ಸಾಲಿನ ಪ್ರತಿಷ್ಠಿತ ಗಾಂಧಿ ಶಾಂತಿ ಪ್ರಶಸ್ತಿ ನೀಡಿರುವುದಕ್ಕೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದ ಹಸೀನಾ, ಈ ಪ್ರಶಸ್ತಿಯ ಮೂಲಕ ಭಾರತವು ದಕ್ಷಿಣ ಏಷ್ಯಾದ ಯೋಗ್ಯ ನಾಯಕ ಮತ್ತು ಗಾಂಧೀಜಿಯ ನಿಜವಾದ ಅನುಯಾಯಿಗಳನ್ನು ಗೌರವಿಸಿದೆ ಎಂದರು. ಬಾಂಗ್ಲಾದೇಶದ ಒಳ್ಳೆಯ ಹಾಗೂ ಕೆಟ್ಟ ಸಂದರ್ಭಗಳಲ್ಲಿ ಭಾರತ ಸರ್ಕಾರ ನಮ್ಮ ಹಿಂದೆ ನಿಂತಿದೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಬಾಂಗ್ಲಾದೇಶದ ಜನರಿಗಾಗಿ ೧೦೯ ಅಂಬ್ಯುಲೆನ್ಸ್ಗಳನ್ನು ಭಾರತ ನೀಡಿದೆ. ಕೋವಿಡ್-೧೯ ಲಸಿಕೆಯನ್ನು ಕೂಡಾ ಗಿಫ್ಟ್ ಆಗಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ಭಾರತ ಸರ್ಕಾರ ಹಾಗೂ ಭಾರತದ ಜನರಿಗೆ ಹೃದಯಪೂರ್ವಕ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಸಿಡಿ ಪ್ರಕರಣಕ್ಕೆ ಟ್ವಿಸ್ಟ್: ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ!
ಬೆಂಗಳೂರು, ಮಾ. ೨೬: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬAಧಿಸಿದAತೆ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಬೆನ್ನಲ್ಲೇ ಇದೀಗ ಯುವತಿಯದ್ದು ಎನ್ನಲಾಗಿರುವ ಆಡಿಯೋವೊಂದು ಬಿಡುಗಡೆಯಾಗಿದ್ದು ಆಡಿಯೋದಲ್ಲಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಲಾಗಿದೆ. ಯುವತಿ ಸಹೋದರ ಮತ್ತು ತಾಯಿ ಜೊತೆ ಫೋನ್ ಕಾಲ್‌ನಲ್ಲಿ ಮಾತನಾಡಿರುವ ಆಡಿಯೋವೊಂದು ಬಿಡುಗಡೆಯಾಗಿದೆ. ಆಡಿಯೋದಲ್ಲಿ ಯುವತಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿರುವುದು ಮತ್ತೊಂದು ತಿರುವು ಪಡೆದುಕೊಂಡಿದೆ. ಸಂತ್ರಸ್ತ ಯುವತಿ ಗೆಳೆಯ ಆಕಾಶ್ ಜತೆಗಿದ್ದ ವೇಳೆಯಲ್ಲಿ ಅವಳು ತನ್ನ ತಮ್ಮನ ಜೊತೆ ಮಾತನಾಡಿದ್ದಾಳೆ ಎನ್ನವ ೬ ನಿಮಿಷ ೫೯ ಸೆಕೆಂಡ್‌ಗಳ ಆಡಿಯೋ ಹೊರಬಿದ್ದಿದೆ. ಆಡಿಯೋ ತುಣಕಿನಲ್ಲಿ ಮೂರು ಬಾರಿ ಡಿ.ಕೆ. ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಯುವತಿಯ ತಮ್ಮ ನಿನಗೆ ಇದೆಲ್ಲಾ ಬೇಕಿತ್ತಾ. ಅವರೆಲ್ಲಾ ದೊಡ್ಡವರು ಅವರನ್ನು ಎದುರು ಹಾಕಿಕೊಳ್ಳಬೇಕಿತ್ತಾ ಎಂದು ಪ್ರಶ್ನಿಸುತ್ತಾನೆ. ಆಗ ಅದಕ್ಕೆ ಉತ್ತರಿಸಿದ ಯುವತಿ ಖುದ್ದು ಡಿ.ಕೆ. ಶಿವಕುಮಾರ್ ಮತ್ತು ಡಿಕೆಶಿ ಕಡೆಯವರೇ ಬರುತ್ತಾರೆ ಎಂದು ಹೇಳಿದ್ದಾಳೆ. ಇದೇ ವೇಳೆ ಯುವತಿ ತಮ್ಮನಿಗೆ ನೀನು ಅಪ್ಪ, ಅಮ್ಮನನ್ನು ಚೆನ್ನಾಗಿ ನೋಡಿಕೋ. ಇದೆಲ್ಲವನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ.
ರಾಷ್ಟçಪತಿ ರಾಮನಾಥ್ ಕೋವಿಂದ್ ಸೇನಾ ಆಸ್ಪತ್ರೆಗೆ ದಾಖಲು
ನವದೆಹಲಿ, ಮಾ. ೨೬: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ರಾಷ್ಟçಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಬೆಳಿಗ್ಗೆ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ರಾಷ್ಟçಪತಿಗಳು ಎಂದಿನAತೆ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ ಎಂದು ಹೇಳಿದೆ. ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ರಾಷ್ಟçಪತಿಗಳು ಸೇನಾ ಆಸ್ಪತ್ರೆಗೆ ಆಗಮಿಸಿದ್ದು, ದಿನನಿತ್ಯದ ತಪಾಸಣೆಗೆ ಒಳಗಾಗುತ್ತಿದ್ದಾರೆ ಮತ್ತು ವೈದ್ಯರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯು ವೈದ್ಯಕೀಯ ಬುಲೆಟಿನ್‌ನಲ್ಲಿ ತಿಳಿಸಿದೆ. ರಾಷ್ಟçಪತಿ ರಾಮನಾಥ್ ಕೋವಿಂದ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿದೆ.