ಮಡಿಕೇರಿ, ಮಾ. ೨೬: ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷ್ಷಯ ರೋಗ ನಿರ್ಮೂಲನಾ ಕೇಂದ್ರ, ರಾಷ್ಟಿçÃಯ ಆರೋಗ್ಯ ಅಭಿಯಾನ (ಕ್ಷಯ ವಿಭಾಗ) ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಕ್ಷಯ ರೋಗ ನಿವಾರಣೆ ಬಗ್ಗೆ ಕೊಡಗು ಜಿಲ್ಲಾ ವಿದ್ಯಾ ಸಾಗರ ಕಲಾವೇದಿಕೆಯ ರಾಜು ಮತ್ತು ತಂಡದವರಿAದ ಬೀದಿ ನಾಟಕ ಮೂಲಕ ಅರಿವು ಮೂಡಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಮಾತನಾಡಿ, ಕ್ಷಯ ರೋಗದ ಲಕ್ಷಣಗಳಾದ ಕೆಮ್ಮು, ಕಫ, ರಾತ್ರಿ ವೇಳೆಯಲ್ಲಿ ಜ್ವರ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಕ್ಷಯರೋಗ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕ್ಷಯರೋಗ ನಿರ್ಮೂಲನಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಆನಂದ್ ಮಾತನಾಡಿ, ಹಲವು ದಶಕಗಳ ಹಿಂದೆ ಕ್ಷಯರೋಗ ನಿರ್ಮೂಲನೆಯು ಬಹಳ ಕಷ್ಟವಾಗಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಭಯ ಪಡುವಂತಹ ಪರಿಸ್ಥಿತಿ ಇಲ್ಲ. ಆರಂಭಿಕ ಹಂತದಲ್ಲೇ ರೋಗವನ್ನು ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.

ನಗರದ ಬಾಲಭವನದಿಂದ ಹೊರಟು ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಕಾವೇರಿ ಕಲಾಕ್ಷೇತ್ರದ ವರೆಗೆ ಜಾಥಾ ಜರುಗಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಎಸ್. ಗೋಪಿನಾಥ್, ಕ್ಷಯ ರೋಗ ನೋಡಲ್ ಅಧಿಕಾರಿ ಡಾ.ಕಾಮತ್, ಕೊಡಗು ವೈದ್ಯಕೀಯ ಸಂಸ್ಥೆಯ ಸೋಂಕು ಶಾಸ್ತçಜ್ಞ ಡಾ. ಮಹೇಶ್ ಮತ್ತಿತರ ವೈದ್ಯಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ನವೀನ್, ಶ್ರೀಧರ್, ಇತರರು ಇದ್ದರು. ಕಮಲ ಪ್ರಾರ್ಥಿಸಿದರು.

ಹಿರಿಯ ಆರೋಗ್ಯ ಸಹಾಯಕರಾದ ಲೋಕೇಶ್ ನಿರೂಪಿಸಿದರು. ಡಾ. ಆನಂದ್ ಸ್ವಾಗತಿಸಿ, ವಂದಿಸಿದರು.