ಸಿದ್ದಾಪುರ, ಮಾ, ೨೬: ಸಿದ್ದಾಪುರದ ಗುಹ್ಯ ಅಗಸ್ತೆö್ಯÃಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಿದ್ದಾಪುರದ ಎಂ.ಜಿ. ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗೊಬ್ಬರ ಗೋದಾಮನ್ನು ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್ ವೆಂಕಟೇಶ್ ಉದ್ಘಾಟಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗುಹ್ಯ ಅಗಸ್ತೆö್ಯÃಶ್ವರ ಸಹಕಾರ ಸಂಘವು ಈಗಾಗಲೇ ಪ್ರಗತಿಯ ಪಥದತ್ತ ದಾಪುಗಾಲು ಇಡುತ್ತಿದೆ. ಸಂಘವು ಉತ್ತಮ ರೀತಿಯಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಅಭಿವೃದ್ಧಿಯನ್ನು ಹೊಂದುತ್ತಿದೆ ಎಂದರು.

ಈ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ರೂ. ೫೦ ಲಕ್ಷ ವೆಚ್ಚದಲ್ಲಿ ಗೊಬ್ಬರವನ್ನು ದಾಸ್ತಾನು ಇಡಲು ನೂತನ ಗೋದಾಮು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣದಲ್ಲಿರುವ ಹಳೆಯ ಕಟ್ಟಡವನ್ನು ಕೆಡವಿ ನೂತನ ವಾಣಿಜ್ಯ ಮಳಿಗೆಯ ಕಟ್ಟಡವನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. ಈ ಬಗ್ಗೆ ಯೋಜನೆಯನ್ನು ರೂಪಿಸಲಾಗಿದೆ ಎಂದು ವೆಂಕಟೇಶ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಚಂದ್ರಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಎಂ.ಬಿ. ಜೋಯ್, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ತೀತಮಾಡ ರೀನಾ ತುಳಸಿ, ಸಂಘದ ನಿರ್ದೇಶಕರುಗಳಾದ ಕುಕ್ಕುನೂರು ಈರಪ್ಪ, ಎಸ್.ಬಿ ಪ್ರತೀಶ್, ಎಂ.ಹೆಚ್. ಮೂಸಾ, ಕೆ.ಡಿ. ನಾಣಯ್ಯ, ಪಿ.ಕೆ. ಚಂದ್ರನ್, ಎಂ.ಸಿ. ವಾಸು, ಪ್ರಮೀಳ, ಪಾರ್ವತಿ, ಹೆಚ್.ಕೆ. ಚೆಲುವಯ್ಯ, ಕೆ.ಎಸ್ ಸುನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಪ್ರಸನ್ನ, ಹಾಗೂ ಗ್ರಾ.ಪಂ. ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಗೋದಾಮು ನಿರ್ಮಾಣ ಮಾಡಿದ ಗುತ್ತಿಗೆದಾರರಾದ ಥೋಮಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.