ಸುAಟಿಕೊಪ್ಪ, ಮಾ. ೨೬: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ ೧೦ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ, ಮಹಿಳೆಯರಿಗೆ ಥ್ರೋಬಾಲ್ ಹಾಗೂ ಮಕ್ಕಳಿಗೆ ಏ. ೧೦-೧೧ ರಂದು ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ೯ ವರ್ಷಗಳಿಂದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವತಿಯಿಂದ ಜನಾಂಗದ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಸತತ ೯ ವರ್ಷಗಳಿಂದ ಕ್ರಿಕೆಟ್ ಪಂದ್ಯಾವಳಿ ಹಾಗೂ ಗ್ರಾಮೀಣ ಕ್ರೀಡಾಕೂಟ ಗಳನ್ನು ನಡೆಸಲಾಗುತ್ತಿದೆ. ವಿಜೇತ ತಂಡಕ್ಕೆ ನಗದು ಸೇರಿದಂತೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತಿದೆ. ಶಿಕ್ಷಣದಲ್ಲಿ ಸಾಧನೆ, ಸಾಮಾಜಿಕ ಹಾಗೂ ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಪ್ರತಿಭೆಗಳನ್ನು ಗುರುತಿಸಿ ಅಸೋಸಿಯೇಷನ್ ವತಿಯಿಂದ ಗೌರವಿಸಲಾಗುತ್ತಿದೆ ಎಂದು ಡಿಸಿಲ್ವಾ ಹೇಳಿದರು. ಈ ಸಾಲಿನ ಜಿಲ್ಲಾ ಕ್ರೀಡಾ ಕೂಟವನ್ನು ಅಬ್ಬೂರುಕಟ್ಟೆಯ ಸಂತ ಲಾರೆನ್ಸ್ರ ದೇವಾಲಯದ ಆವರಣದಲ್ಲಿ ಏ.೧೦ ಮತ್ತು ೧೧ ರಂದು ನಡೆಸಲಾಗುತ್ತಿದೆ. ಪುರುಷರಿಗೆ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿ, ಹಗ್ಗ-ಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಹಗ್ಗ-ಜಗ್ಗಾಟ ಹಾಗೂ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ನಡೆಸಲಾಗುತ್ತಿದೆ. ಕೊಡಗಿನ ಎಲ್ಲಾ ರೋಮನ್ ಕ್ಯಾಥೋಲಿಕ್ ಧರ್ಮ ಕೇಂದ್ರಗಳಿAದ ಕ್ರೀಡಾಪಟುಗಳು ಪಾಲ್ಗೊಂಡು, ಈ ಪಂದ್ಯಾವಳಿಯನ್ನು ಯಶಸ್ವಿಗೊಳಿಸ ಬೇಕೆಂದು ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎಫ್. ಸಬಾಸ್ಟೀನ್, ಉಪಾಧ್ಯಕ್ಷರುಗಳಾದ ಜಾನ್ಸ್ನ್ ಪಿಂಟೋ, ಜೋಕಿಂವಾಸ್, ಪಿ.ವಿ. ಜಾನ್ಸ್ನ್, ಖಜಾಂಚಿ ಐ.ಡಿ. ರಾಯ್, ಸಂಘಟನಾ ಕಾರ್ಯದರ್ಶಿ ಮರ‍್ವಿನ್ ಲೋಬೋ, ಗೌರವಾಧ್ಯಕ್ಷ ವಿ.ಎ. ಲಾರೆನ್ಸ್, ಜಿಲ್ಲಾ ಸಂಚಾಲಕ ಜೋಕಿಂ ರಾಡ್ರಿಗಸ್ ತಿಳಿಸಿದ್ದಾರೆ.