ವೀರಾಜಪೇಟೆ, ಮಾ. ೨೬: ವಿದ್ಯಾರ್ಥಿಗಳು ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜದಲ್ಲಿ ಸಂಸ್ಕಾರಯುತವಾದ ಜೀವನ ನಡೆಸುವಂತಾಗಬೇಕು ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಸಲಹೆ ನೀಡಿದರು.

ಸಮೀಪದ ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ ಪ್ರಥಮ ಬಾರಿಗೆ ಶಾಲಾ ಇತಿಹಾಸ ಹಾಗೂ ಶೈಕ್ಷಣಿಕ ದಾಖಲೆ ಒಳಗೊಂಡ ಸ್ಫಟಿಕ (ಜ್ಞಾನಯಾಣದ ಫಲಕ)ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ಆತ್ಮವಿಶ್ವಾಸ ಬೆಳೆಸಿಕೊಂಡು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸುವಂತಾಗಬೇಕು ಎಂದರು.

ಮುಖ್ಯ ಅತಿಥಿಗಳಾಗಿದ್ದ ಜಿ.ಪಂ. ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅಪ್ಪಂಡೇರAಡ ಭವ್ಯ ಮಾತನಾಡಿ ಈ

ಶಾಲೆ ಗ್ರಾಮೀಣ ಭಾಗದಲ್ಲಿದ್ದರೂ ಕಳೆದ ಸಾಲಿನಲ್ಲಿ ಶೇ.೧೦೦ ರ ಫಲಿತಾಂಶ ಪಡೆದಿದೆ. ಈ ಸಾಧನೆ ಪ್ರಶಂಶನೀಯ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಬೀಳಗಿ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯೋಜನಾಧಿಕಾರಿ ವನಜಾಕ್ಷಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಕ್ಕಾಟಿರ ನಾಣಯ್ಯ ಮಾತನಾಡಿ, ಕಳೆದ ಬಾರಿಯಂತೆ ಈ ಬಾರಿಯು ಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ನೂರರ ಫಳಿತಾಂಶ ಪಡೆಯುವಂತಾÀಗಬೇಕು ಎಂದರು. ಈ ಸಂದರ್ಭ ಜಿ.ಪಂ. ಸದಸ್ಯ ಮೂಕೊಂಡ ಶಶಿಸುಬ್ರಮಣಿ, ಶಾಲಾ ಮುಖ್ಯಶಿಕ್ಷಕ ಲೋಕೇಶ್, ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇದಂಡ ಜಿ. ಪೊನ್ನಪ್ಪ ಕಾರ್ಯನಿರ್ವಾಹಕರಾದ ಕರ್ನಂಡ ಎನ್. ಬೊಳ್ಳಮ್ಮ, ಖಜಾಂಚಿ ಅಲ್ಲಪಂಡ ಉತ್ತಪ್ಪ ಆಡಳಿತಾಧಿಕಾರಿ ಲಕ್ಷಿö್ಮÃನಾರಾಯಣ ಹಾಗೂ ಆಡಳಿತ ಮಂಡಳಿ ಸದಸ್ಯರು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕಳೆದ ಸಾಲಿನಲ್ಲಿ ಶಾಲೆಯು ಹತ್ತನೇ ತರಗತಿ ಫಲಿತಾಂಶದಲ್ಲಿ ಶೇ. ೧೦೦ ರ ಸಾಧನೆ ಮಾಡಿದಕ್ಕಾಗಿ ಶಿಕ್ಷಕರು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.