ಮಡಿಕೇರಿ, ಮಾ. ೨೬: ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕೆ.ರಾಜು ಮೊಗವೀರ ಅವರು ಇಂದು ಅಧಿಕಾರ ವಹಿಸಿಕೊಂಡರು. ಹೆಚ್ಚುವರಿ ಜಿಲ್ಲಾಧಿಕಾರಿ ಯಾಗಿ (ಪ್ರಭಾರ) ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ ಅವರಿಂದ ಅಧಿಕಾರ ಸ್ವೀಕರಿಸಿದರು. ಹಿರಿಯ ಕೆ.ಎ.ಎಸ್ ಅಧಿಕಾರಿ ಮೊಗವೀರ ಅವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.