ಕೂಡಿಗೆ, ಮಾ. ೨೭: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ರಾಷ್ಟಿçÃಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಜೆ.ಸಿ. ಬೋಸ್ ಇಕೋ ಕ್ಲಬ್ (ಪರಿಸರ ಸಂಘ) ವತಿಯಿಂದ ವಿಶ್ವ ಜಲ ದಿನಾಚರಣೆ - ೨೦೨೧ ರ ಅಂಗವಾಗಿ ‘ಉತ್ತಮ ಭವಿಷ್ಯಕ್ಕಾಗಿ ಜಲ ಸಂರಕ್ಷಣೆ' ಕುರಿತು ಏರ್ಪಡಿಸಿದ್ದ ಜಿಲ್ಲಾಮಟ್ಟದ ಜಲ ಜಾಗೃತಿ ಆಂದೋಲನಕ್ಕೆ ಜಿಲ್ಲಾ ಪಂಚಾಯ್ತಿ ಕೃಷಿ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್. ಮಂಜುಳಾ ಚಾಲನೆ ನೀಡಿದರು.

ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಕೆ ಮಾಡಿ ಹನಿ ಹನಿ ನೀರನ್ನು ಉಳಿಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಜೀವಜಲ ಸಂರಕ್ಷಿಸಲು ಪಣ ತೊಡಬೇಕಿದೆ ಎಂದರು. ವಿಶ್ವ ಜಲ ದಿನದ ಮಹತ್ವ ಹಾಗೂ ನೀರಿನ ಸಂರಕ್ಷಣೆ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ನೀರು ಪ್ರಕೃತಿಯ ಅಮೂಲ್ಯ ಸಂಪತ್ತು. ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಜಲ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ಪ್ರತಿಯೊಬ್ಬರೂ ಭವಿಷ್ಯಕ್ಕಾಗಿ ಜಲ ಸಂರಕ್ಷಿಸಲು ಬದ್ಧರಾಗಬೇಕಿದೆ ಎಂದರು.

ನೀರನ್ನು ಮಿತವಾಗಿ ಬಳಸಿ ಜಲ ಸಂರಕ್ಷಿಸುವ ಕುರಿತ ಸಹಿ ಸಂಗ್ರಹ ಅಭಿಯಾನಕ್ಕೆ ತಾವು ಸಹಿ ಹಾಕುವ ಮೂಲಕ ಚಾಲನೆ ನೀಡಿದ ತಾ.ಪಂ. ಮಾಜಿ ಸದಸ್ಯ ಕೆ.ಟಿ. ಅರುಣ್ ಕುಮಾರ್, ಪ್ರತಿಯೊಬ್ಬರೂ ಜಲ ಸಂರಕ್ಷಣೆಗೆ ಪಣ ತೊಡಗಬೇಕು ಎಂದರು.

ಗ್ರಾ.ಪಂ. ಸದಸ್ಯ ಕೆ.ಕೆ. ಭೋಗಪ್ಪ ಜಲ ಸಂರಕ್ಷಣೆಗೆ ಸಂಬAಧಿಸಿದAತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನೀರಿನ ಸಂರಕ್ಷಣೆ ಕುರಿತು ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜಿ. ಶ್ರೀನಾಥ್ ಉಪನ್ಯಾಸ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ್ ನಾಯಕ್, ಜಲ ಸಂರಕ್ಷಣೆ ಕುರಿತ ಮಾಹಿತಿ ಪತ್ರವನ್ನು ಬಿಡುಗಡೆಗೊಳಿಸಿದರು.

ಜಲ ಸಂರಕ್ಷಣೆ ಕುರಿತು ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರಾದ ಜೆ. ಫಿಲೋಮಿನಾ, ದೀಪಾಕುಮಾರಿ, ಪಿಡಿಓ ಎಂ.ಆರ್. ಸಂತೋಷ್, ತೊರೆನೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಕುಮಾರ್, ಶಿಕ್ಷಕ ಎಸ್.ಕೆ. ಪ್ರಸನ್ನ, ಸಿ.ಆರ್.ಪಿ. ಮುಬೀನಾ ಕೌಸರ್, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಡಿ. ರಮೇಶ್, ದಯಾನಂದ ಪ್ರಕಾಶ್, ಬಿ.ಎಸ್. ಅನ್ಸಿಲಾ ರೇಖಾ, ಎಸ್.ಎಂ. ಗೀತಾ, ಪಿ. ಅನಿತಾಕುಮಾರಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭೋಜಮ್ಮ, ಶಿಕ್ಷಕ ಡಿ.ವಿ. ಗಣೇಶ್ ಇದ್ದರು. ಜಲದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.