ಮಡಿಕೇರಿ, ಮಾ. ೨೭: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗೋಣಿಕೊಪ್ಪ, ಪೊನ್ನಂಪೇಟೆ ಸೇರಿದಂತೆ ಮೇ-೨೦೨೧ರ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ೬೮ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಮತ್ತು ೧೪೭ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಹಾಗೂ ೨ ಪಟ್ಟಣ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ೨೭ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಆದೇಶಿಸಿದೆ. ಚುನಾವಣಾ ವೇಳಾಪಟ್ಟಿಯಂತೆ, ತಾ. ೨೯ರಂದು ಮತದಾನ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮಪಂಚಾಯಿತಿ/ ಪಟ್ಟಣ ಪಂಚಾಯಿತಿ/ ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟಿçÃಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಖ್ಯೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆಡೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ತಾ. ೨೯ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಅದಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕೆಂದು ಸರ್ಕಾರದ (ರಾಜ್ಯ ಶಿಷ್ಟಾಚಾರ) ವಿಭಾಗದ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದಾರೆ.