ಸೋಮವಾರಪೇಟೆ, ಮಾ.೨೭: ಹಲವಷ್ಟು ಅಡೆತಡೆಗಳ ನಂತರವೂ ಭೂಮಿಪೂಜೆ ನೆರವೇರಿ ಬರೋಬ್ಬರಿ ೭ ವರ್ಷಗಳ ತರುವಾಯ ಸೋಮವಾರಪೇಟೆಯಲ್ಲಿ ಇನ್ನೂ ನಿರ್ಮಾಣದ ಹಂತದಲ್ಲಿರುವ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನ ಕಾಮಗಾರಿಗೆ ಫೆಡರೇಷನ್ ಆಫ್ ಇಂಟರ್‌ನ್ಯಾಷನಲ್ ಹಾಕಿ ಸಂಸ್ಥೆಯಿAದ ಗುಣಮಟ್ಟದ ಖಾತ್ರಿ ಹಾಗೂ ಉತ್ತಮ ಗುಣಮಟ್ಟದ ಯೋಗ್ಯತಾ ಪತ್ರ ನೀಡಿರುವುದು ಸಿಂಥೆಟಿಕ್ ಹಾಕಿ ಟರ್ಫ್ ಮೈದಾನ ಕಾಮಗಾರಿಗೆ ಫೆಡರೇಷನ್ ಆಫ್ ಇಂಟರ್‌ನ್ಯಾಷನಲ್ ಹಾಕಿ ಸಂಸ್ಥೆಯಿAದ ಗುಣಮಟ್ಟದ ಖಾತ್ರಿ ಹಾಗೂ ಉತ್ತಮ ಗುಣಮಟ್ಟದ ಯೋಗ್ಯತಾ ಪತ್ರ ನೀಡಿರುವುದು ಸಿಂಥೆಟಿಕ್ ಹಾಕಿ ಟರ್ಫ್ ಮೈದಾನ ಕಾಮಗಾರಿಗೆ ಫೆಡರೇಷನ್ ಆಫ್ ಇಂಟರ್‌ನ್ಯಾಷನಲ್ ಹಾಕಿ ಸಂಸ್ಥೆಯಿAದ ಗುಣಮಟ್ಟದ ಖಾತ್ರಿ ಹಾಗೂ ಉತ್ತಮ ಗುಣಮಟ್ಟದ ಯೋಗ್ಯತಾ ಪತ್ರ ನೀಡಿರುವುದು ಟರ್ಫ್ ಕಾಮಗಾರಿ ಪರಿಶೀಲನೆ ನಡೆಸಿದ್ದು, ಕಾಮಗಾರಿ ತೃಪ್ತಿದಾಯಕ ವಾಗಿದೆ. ಉತ್ತಮ ಪ್ರದರ್ಶನಕ್ಕೆ ಟರ್ಫ್ ಕಾಮಗಾರಿ ಪರಿಶೀಲನೆ ನಡೆಸಿದ್ದು, ಕಾಮಗಾರಿ ತೃಪ್ತಿದಾಯಕ ವಾಗಿದೆ. ಉತ್ತಮ ಪ್ರದರ್ಶನಕ್ಕೆ (ಮೊದಲ ಪುಟದಿಂದ) ಎಂದು ದೃಢೀಕರಣ ನೀಡಲಾಗಿದೆ. ಅಸಲಿಗೆ ಮೈದಾನದಲ್ಲಿ ಟರ್ಫ್ ಅಳವಡಿಸಿರುವುದನ್ನು ಹೊರತು ಪಡಿಸಿದರೆ ಇನ್ನಿತರ ಕಾಮಗಾರಿಗಳನ್ನು ನಡೆಸಿಲ್ಲ. ಟರ್ಫ್ ನಿರ್ವಹಣೆಗೆ ಮೂಲಭೂತವಾಗಿ ಬೇಕಾದ ನೀರಿನ ವ್ಯವಸ್ಥೆಯನ್ನೇ ಮಾಡದಿದ್ದರೂ ಫೆಡರೇಷನ್‌ನಿಂದ ದೃಢೀಕರಣ ಪತ್ರ ಸಿಕ್ಕಿದ್ದಾದರೂ ಹೇಗೆ? ಎಂಬ ಪ್ರಶ್ನೆ ಇದೀಗ ಕ್ರೀಡಾಭಿಮಾನಿಗಳಲ್ಲಿ ಮೂಡಿದೆ.ನೀರಿಗಾಗಿ ಮೈದಾನದ ಮೂಲೆಯಲ್ಲಿ ಬೋರ್‌ವೆಲ್ ಕೊರೆಯಲಾಗಿದ್ದರೂ ಅದಕ್ಕೆ ಮೋಟಾರ್ ಅಳವಡಿಸಿಲ್ಲ. ಪೈಪ್‌ಲೈನ್ ಮಾಡಿಲ್ಲ. ನೀರು ಸಂಗ್ರಹಕ್ಕೆ ಬೃಹತ್ ಟ್ಯಾಂಕ್ ನಿರ್ಮಿಸಿಲ್ಲ. ಟ್ಯಾಂಕ್ ನಿರ್ಮಿಸಲು ಗುಂಡಿ ತೋಡಿದ್ದನ್ನು ಹೊರತುಪಡಿಸಿದರೆ ಕಾಮಗಾರಿ ಪ್ರಾರಂಭಿಸಿಲ್ಲ. ಮೈದಾನದ ಸುತ್ತಲೂ ಚರಂಡಿ, ಮೆಸ್, ಕ್ರೀಡಾಪಟುಗಳಿಗೆ ಬೇಕಾಗಿರುವ ಕೊಠಡಿ, ಮೋಟಾರ್ ಕೊಠಡಿ, ಸಂಪ್, ಇಂಟರ್‌ಲಾಕ್ ಅಳವಡಿಸುವುದು ಸೇರಿದಂತೆ ಇನ್ನೂ ಶೇ.೪೦ರಷ್ಟು ಕಾಮಗಾರಿಗಳು ಬಾಕಿ ಉಳಿದಿದೆ. ಆದರೂ ಎಫ್‌ಐಹೆಚ್‌ನಿಂದ ದೃಢೀಕರಣ ಪತ್ರ ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ.೨೦೧೩ರಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕ್ರೀಡಾ ಸಚಿವರಾಗಿದ್ದ ಸಂದರ್ಭ ಸೋಮವಾರಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ರೂ. ೩.೪೦ ಕೋಟಿ ಅನುದಾನದಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು.

ಕಳೆದ ತಾ. ೧೪.೦೩.೨೦೧೩ರಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಂದಿನ ನಿರ್ದೇಶಕ ಬಲದೇವಕೃಷ್ಣ ಅವರ ಉಪಸ್ಥಿತಿಯಲ್ಲಿ ಅಂದಿನ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಶಿವಪ್ಪ ಅವರು ಜೂನಿಯರ್ ಕಾಲೇಜು ಮೈದಾನದಲ್ಲಿ ಟರ್ಫ್ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.

ಆದರೆ ಬರೋಬ್ಬರಿ ಆರು ವರ್ಷ ಕಳೆದರೂ ಇಲ್ಲಿ ಟರ್ಫ್ ಕಾಮಗಾರಿ ನಡೆಯಲಿಲ್ಲ. ಸ್ಥಳೀಯ ಹಾಕಿ ಪ್ರೇಮಿಗಳು ಶಾಸಕ ಅಪ್ಪಚ್ಚುರಂಜನ್ ಅವರ ಮೇಲೆ ನಿರಂತರ ಒತ್ತಡ ಹೇರಿದ ಪರಿಣಾಮ ಈ ಹಿಂದಿನ ಎಸ್ಟಿಮೇಟ್‌ಗಿಂತಲೂ ೭೫ ಲಕ್ಷ ಹೆಚ್ಚು ಅನುದಾನ ಒದಗಿಸಿ ಒಟ್ಟು ೪.೧೫ ಕೋಟಿ ವೆಚ್ಚದಲ್ಲಿ ಟರ್ಫ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದುದು ಇದೀಗ ಸ್ಥಗಿತಗೊಂಡಿದೆ.

ಗ್ರೇಟ್ ಸ್ಪೋರ್ಟ್ಸ್ ಇನ್‌ಫ್ರಾ ಪ್ರೆöÊವೇಟ್ ಲಿಮಿಟೆಡ್ ಸಂಸ್ಥೆ ಕಾಮಗಾರಿಯ ಹೊಣೆ ಹೊತ್ತಿದ್ದು, ಅಂರ‍್ರಾಷ್ಟಿçÃಯ ಗುಣಮಟ್ಟದಲ್ಲಿ ಮೈದಾನ ನಿರ್ಮಾಣವಾಗುವ ಆಶಾಭಾವನೆ ಎಲ್ಲರಲ್ಲೂ ಮೂಡಿತ್ತು. ಕ್ರೀಡಾಪ್ರೇಮಿಗಳ ನಿರೀಕ್ಷೆಯಂತೆ ಕಾಮಗಾರಿಯೂ ಪ್ರಾರಂಭಗೊAಡಿತು. ಈ ನಡುವೆ ಮೈದಾನದ ಮೇಲುಸ್ತುವಾರಿಯಾಗಿ ಶಾಸಕರ ಸಲಹೆಯಂತೆ ಸಮಿತಿ ರಚಿಸಲಾಗಿದ್ದು, ಸಮಿತಿಯ ಪ್ರಮುಖರು ಕಾಮಗಾರಿಯ ಬಗ್ಗೆ ಆಗಾಗ್ಗೆ ಗಮನ ಹರಿಸುತ್ತಿದ್ದರು.

ಮೈದಾನಕ್ಕೆ ಡಾಂಬರು ಹಾಕುವ ಸಂದರ್ಭ ಕಳಪೆ ಕಂಡುಬAದ ಹಿನ್ನೆಲೆ ಸಮಿತಿಯ ಪದಾಧಿಕಾರಿಗಳೇ ತಡೆದು ಮರು ಡಾಂಬರೀಕರಣವನ್ನೂ ಮಾಡಿಸಿದ್ದರು. ಅದಾದ ನಂತರ ಸಿಂಥೆಟಿಕ್ ಮ್ಯಾಟ್ ಅಳವಡಿಸಲಾಯಿತು. ಇದೀಗ ಓವರ್ ಹೆಡ್ ಟ್ಯಾಂಕ್, ಮೈದಾನದ ಸುತ್ತಲೂ ಫೆನ್ಸಿಂಗ್, ತಡೆಗೋಡೆ ನಿರ್ಮಾಣ, ನೀರಿನ ಸೌಲಭ್ಯ ಸೇರಿದಂತೆ ಇತರ ಕಾಮಗಾರಿ ಬಾಕಿ ಇರುವಂತೆಯೇ ಸಮಿತಿಯ ಗಮನಕ್ಕೆ ಬಾರದಂತೆ ಎಫ್‌ಐಹೆಚ್‌ನಿಂದ ದೃಢೀಕರಣ ಪತ್ರ ನೀಡಲಾಗಿದೆ.

ಇದರಿಂದಾಗಿ ಎಫ್‌ಐಹೆಚ್ ಮತ್ತು ಗುತ್ತಿಗೆದಾರ ಕಂಪೆನಿಯ ಮೇಲೆ ಅನುಮಾನ ಮೂಡುತ್ತಿದ್ದು, ಕಾಮಗಾರಿ ಪೂರ್ಣಗೊಳಿಸದೇ ಬಿಲ್ ಮಾಡಿಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ಸಮಿತಿಯ ಪದಾಧಿಕಾರಿಗಳ ಸಹಿತ ಕ್ರೀಡಾಭಿಮಾನಿಗಳು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಗಮನಿಸಬೇಕಾದ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಣ್ಮುಚ್ಚಿ ಕುಳಿತಿದೆ!

-ವಿಜಯ್ ಹಾನಗಲ್