ನಾಪೋಕ್ಲು, ಮಾ. ೨೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ-ಮಡಿಕೇರಿ ವಲಯ ೨ನೇ ಮೊಣ್ಣಂಗೇರಿ ಕಾರ್ಯಕ್ಷೇತ್ರದ ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ೫ ಲಕ್ಷ ರೂ. ಚೆಕ್ ವಿತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಯೋಜನಾಧಿಕಾರಿ ಗಳಾದ ಪುಷ್ಪರಾಜ್, ಸದಾಶಿವ ಗೌಡ, ದೇವಳ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಒಕ್ಕೂಟದ ಸದಸ್ಯರು ಇದ್ದರು.