ಹೆಬ್ಬಾಲೆ ಮಾ. ೨೯: ಸಮೀಪದ ಶಿರಂಗಾಲ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವಿವಾರ್ಷಿಕ ಜಾತ್ರೋತ್ಸವ ಶ್ರದ್ಧಾಭಕ್ತಿ ಯಿಂದ ನಡೆಯಿತು. ಕೊಡಗು ಹಾಗೂ ಹಾಸನ ಜಿಲ್ಲೆಯ ಗಡಿ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯುವ ಗ್ರಾಮೀಣ ಭಾಗದ ಅತೀ ದೊಡ್ಡ ಜಾತ್ರೆಗಳಲ್ಲಿ ಶ್ರೀ ಮಂಟಿಗಮ್ಮ ದೇವಿಯ ಉತ್ಸವದಲ್ಲಿ ಒಂದಾಗಿದ್ದು, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಗಡಿ ಗ್ರಾಮಗಳ ಜನರು ಸೇರಿದಂತೆ ವಿವಿಧೆಡೆಗಳಿಂದ ಅಪಾರ ಭಕ್ತಾರು ಪಾಲ್ಗೊಂಡಿದ್ದರು. ಶುಕ್ರವಾರ ಗ್ರಾಮದ ಕೋಟೆಯ ಗದ್ದಿಗೆಯಲ್ಲಿ ರಾತ್ರಿ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು. ದೇವಿಯನ್ನು ಭಕ್ತಾದಿಗಳು ತಮಟೆ ಮತ್ತು ಮಂಗಳವಾದ್ಯದೊAದಿಗೆ ಪವಿತ್ರ ಬನಕ್ಕೆ ದೇವಿಗೆ ಸಂಬAಧಿ ಸಿದ ಆಭರಣಗಳನ್ನೊಳ ಗೊಂಡ ಬುಟ್ಟಿ ಮತ್ತಿತರ ಸಾಂಪ್ರದಾಯಿಕ ಸಾಮಗ್ರಿಗಳನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ದೇವಿಯ ಬನದಲ್ಲಿ ಹಾಕಿರುವ ಅಗ್ನಿಕೊಂಡವನ್ನು ಹರಕೆ ಹೊತ್ತ ಭಕ್ತಾದಿಗಳು ತುಳಿದು ದೇವರ ದರ್ಶನ ಪಡೆದರು. ಹಬ್ಬದ ಅಂಗವಾಗಿ ಗ್ರಾಮದ ಸಂತೆಮಾಳ ಮೈದಾನದಲ್ಲಿ ಏರ್ಪಡಿಸಿದ್ದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ದೇವಸ್ಥಾನ ಮತ್ತು ಗ್ರಾಮವನ್ನು ಹಸಿರು-ತಳಿರು ತೋರಣಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಶೃಂಗರಿಸ ಲಾಗಿತ್ತು.
ದೇವಸ್ಥಾನ ಸಮಿತಿ ಅಧ್ಯಕ್ಷ ರುದ್ರಪ್ಪ ಮತ್ತು ಕಾರ್ಯದರ್ಶಿ ಎಸ್. ಎಸ್. ಮಹೇಶ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿ ದವು. ದೇವಾಲಯದ ಪ್ರಧಾನ ಅರ್ಚಕ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು. ಬನದಲ್ಲಿ ಸೇರಿದ್ದ ಜಾತ್ರೆ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸಿತು. ಈ ಸಂದರ್ಭ ದೇವಾಲಯ ಸಮಿತಿ ಉಪಾಧ್ಯಕ್ಷ ಎಸ್. ಎಸ್. ರಮೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್. ಎಸ್. ಚಂದ್ರಶೇಖರ್, ಮುಖಂಡರಾದ ಎಸ್.ವಿ. ಕಾಳಿಂಗಪ್ಪ, ಎಸ್. ಇ. ರಾಜು, ಹುಚ್ಚಯ್ಯ, ಬಿ. ಎಸ್. ಬಸವಣಯ್ಯ, ಎಸ್. ಕೆ. ಪ್ರಸನ್ನ, ಎಸ್.ಆರ್. ಮೋಹನ್, ಸಿ.ಎನ್. ಲೋಕೇಶ್, ದನುಕುಮಾರ್ ಎಸ್.ಎನ್.ಚಂದ್ರಪ್ಪ ಮತ್ತಿತರ ಇದ್ದರು.