*ಸಿದ್ದಾಪುರ, ಮಾ. ೨೯: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ೨೦೧೯-೨೦೨೦ನೇ ಸಾಲಿನಲ್ಲಿ ಗಳಿಸಿದ ನಿವ್ವಳ ಲಾಭದಲ್ಲಿ ಶೇ. ೨ರ ಪ್ರಕಾರ ರೂ.೪೫,೧೭೮ನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ಗೆ ನೀಡಲಾಯಿತು.
ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಅವರಿಗೆ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ಅವರು ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಸಂಘದ ಆಂತರಿಕ ಲೆಕ್ಕಪರಿಶೋಧಕ ಹೆಚ್.ಬಿ.ರಮೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ನಂದಿನಿ ಮತ್ತಿತರರು ಹಾಜರಿದ್ದರು.