ಮಡಿಕೇರಿ ಮಾ.೨೯ : ಖಾಲಿಯಾಗಿರುವ ಖಜಾನೆಯನ್ನು ಭರ್ತಿ ಮಾಡುವುದಕ್ಕಾಗಿ ವಾಹನ ಚಾಲಕರಿಗೆ ದಂಡ ವಿಧಿಸುವ ನೆಪದಲ್ಲಿ ಸರ್ಕಾರ ಹಗಲು ದರೋಡೆಯಲ್ಲಿ ತೊಡಗಿದೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ಇತ್ತೀಚಿನ ದಿನಗಳಲ್ಲಿ ಸಂಚಾರಿ ಪೊಲೀಸರು ಕಂಡಕAಡಲ್ಲಿ ವಾಹನಗಳನ್ನು ಅಡ್ಡಗಟ್ಟಿ ದಂಡ ವಿಧಿಸುತ್ತಿರುವುದರಿಂದ ಚಾಲಕರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಅಲ್ಲದೆ ಅಪಘಾತಗಳು ಸಂಭವಿಸುವ ಆತಂಕವನ್ನು ಎದುರಿಸುತ್ತಿದ್ದಾರೆ. ಸರ್ಕಾರ ನೀಡಿರುವ ಗುರಿ ಮುಟ್ಟಲು ಪೊಲೀಸರು ದಂಡ ವಸೂಲಿಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದ್ದಾರೆ.

ಪೊಲೀಸರು ರಸ್ತೆಯ ಮಧ್ಯ ಭಾಗದಲ್ಲೇ ದಿಢೀರ್ ಆಗಿ ವಾಹನಗಳನ್ನು ಅಡ್ಡಗಟ್ಟಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದರಿಂದ ವಾಹನಗಳು ಚಾಲಕರ ನಿಯಂತ್ರಣ ಕಳೆದುಕೊಂಡು ಅಪಾಯ ಸಂಭವಿಸುವ ಆತಂಕ ಎದುರಾಗುತ್ತಿದೆ. ಕೋವಿಡ್ ಸಂಕಷ್ಟದಿAದ ಜನ ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ, ಇದರ ನಡುವೆಯೇ ದುಬಾರಿ ದಂಡ ವಿಧಿಸುವ ಮೂಲಕ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ರಾಜ್ಯ ಸರ್ಕಾರ ಸರ್ಕಾರ ನೀಡಿರುವ ಗುರಿ ಮುಟ್ಟಲು ಪೊಲೀಸರು ದಂಡ ವಸೂಲಿಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದ್ದಾರೆ.

ಪೊಲೀಸರು ರಸ್ತೆಯ ಮಧ್ಯ ಭಾಗದಲ್ಲೇ ದಿಢೀರ್ ಆಗಿ ವಾಹನಗಳನ್ನು ಅಡ್ಡಗಟ್ಟಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದರಿಂದ ವಾಹನಗಳು ಚಾಲಕರ ನಿಯಂತ್ರಣ ಕಳೆದುಕೊಂಡು ಅಪಾಯ ಸಂಭವಿಸುವ ಆತಂಕ ಎದುರಾಗುತ್ತಿದೆ. ಕೋವಿಡ್ ಸಂಕಷ್ಟದಿAದ ಜನ ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ, ಇದರ ನಡುವೆಯೇ ದುಬಾರಿ ದಂಡ ವಿಧಿಸುವ ಮೂಲಕ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ರಾಜ್ಯ ಸರ್ಕಾರ ಖಜಾನೆ ಖಾಲಿ ಮಾಡಿಕೊಂಡು ಭರ್ತಿಗಾಗಿ ಜನರ ಮೇಲೆ ಒತ್ತಡ ಹೇರುತ್ತಿದೆ ಎಂದು ಗಣೇಶ್ ದೂರಿದ್ದಾರೆ.

ಪೊಲೀಸರು ವಿನಾಕಾರಣ ದಂಡ ವಿಧಿಸುವ ಕ್ರಮವನ್ನು ಮುಂದುವರೆಸಿದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಜೆಡಿಎಸ್ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.