ಕೊಡ್ಲಿಪೇಟೆ, ಮಾ. ೩೦: ಕೊಡ್ಲಿಪೇಟೆ ರೋಟರಿ ಹೇಮಾವತಿ, ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ಮೈಸೂರಿನ ಸುಯೋಗ್ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
ಶಿಬಿರವನ್ನು ಶನಿವಾರಸಂತೆ ಕಾವೇರಿ ಕ್ಲಿನಿಕ್ ವೈದ್ಯ ಡಾ. ಪುಟ್ಟರಾಜ್ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇಂತಹ ಶಿಬಿರಗಳ ಪ್ರಯೋಜನ ಪಡೆಯಬೇಕು ಎಂದರು.
ಸುಯೋಗ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆದಿತ್ಯ ಉಡುಪ ಮಾತನಾಡಿ, ಹಲವಷ್ಟು ಮಂದಿಗೆ ರೋಗಗಳ ಬಗ್ಗೆ ಅರಿವು ಇರುವುದಿಲ್ಲ. ಹೃದಯ ಸಂಬAಧಿ ಸಮಸ್ಯೆ, ಶುಗರ್, ಬಿಪಿ, ಸ್ತಿçÃರೋಗ ಸಮಸ್ಯೆ ಮುಂತಾದ ಕಾಯಿಲೆಗಳ ಬಗ್ಗೆ ಪ್ರಾಥಮಿಕ ವಾಗಿಯೇ ಅರಿತುಕೊಂಡು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಕೊಡ್ಲಿಪೇಟೆ ರೋಟರಿ ಹೇಮಾವತಿ ಕ್ಲಬ್ ಅಧ್ಯಕ್ಷ ಹೆಚ್.ಎಂ. ದಿವಾಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ, ಪ್ರಾಂಶುಪಾಲ ಎಂ.ಆರ್. ನಿರಂಜನ್, ರೋಟರಿ ಹೇಮಾವತಿ ಕಾರ್ಯಕ್ರಮ ಸಂಯೋಜಕ ಡಾ. ಸಿ.ಆರ್. ಉದಯಕುಮಾರ್, ವಿದ್ಯಾಸಂಸ್ಥೆ ನಿರ್ದೇಶಕರು, ಹೇಮಾವತಿ ಕ್ಲಬ್ ಅಧ್ಯಕ್ಷ ಹೆಚ್.ಎಂ. ದಿವಾಕರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ, ಪ್ರಾಂಶುಪಾಲ ಎಂ.ಆರ್. ನಿರಂಜನ್, ರೋಟರಿ ಹೇಮಾವತಿ ಕಾರ್ಯಕ್ರಮ ಸಂಯೋಜಕ ಡಾ. ಸಿ.ಆರ್. ಉದಯಕುಮಾರ್, ವಿದ್ಯಾಸಂಸ್ಥೆ ನಿರ್ದೇಶಕರು, ರೋಟರಿ ಕ್ಲಬ್ ಪದಾಧಿಕಾರಿಗಳು ಹಾಜರಿದ್ದರು.
ಶಿಬಿರದಲ್ಲಿ ಹೃದಯ ಸಂಬAಧಿ ಕಾಯಿಲೆ, ಸ್ತಿçÃರೋಗ, ಕಿವಿ, ಗಂಟಲು ಮೂಗು ಸಮಸ್ಯೆ, ಮಕ್ಕಳ ಸಮಸ್ಯೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿದಂತೆ ಇನ್ನಿತರ ಸಮಸ್ಯೆ ಇರುವ ರೋಗಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಅಗತ್ಯವಿದ್ದವರಿಗೆ ಇಸಿಜಿ-ಎಕೋ ಪರೀಕ್ಷೆ ನಡೆಯಿತು.
ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ಆದಿತ್ಯ, ಡಾ. ಅಮೂಲ್ಯ, ಡಾ. ಪ್ರದೀಪ್, ಡಾ.ಯೋಗಮೂರ್ತಿ ಭಾಗವಹಿಸಿ ರೋಗಿಗಳ ತಪಾಸಣೆ ನಡೆಸಿದರು.