ಸುಂಟಿಕೊಪ್ಪ, ಮಾ. ೩೦: ಮಾದಾಪುರ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಫುಟ್ಬಾಲ್, ಹಾಕಿ, ಬಾಸ್ಕೆಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಕ್ರೀಡಾಕೂಟದಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.

ಮೂರ್ನಾಡುವಿನಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಯಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಹಾಕಿ ಪಂದ್ಯಾವಳಿಯಲ್ಲಿ ಬಾಲಕಿಯರು ಪ್ರಶಸ್ತಿಯನ್ನು ಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ನೇಮಕಗೊಂಡಿದ್ದಾರೆ.

ಮಡಿಕೇರಿಯಲ್ಲಿ ನಡೆದ ಬಾಸ್ಕೆಟ್‌ಬಾಲ್ ಹಾಗೂ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಬಾಲಕಿಯರು ಪ್ರಶಸ್ತಿಯನ್ನು ಜಯಿಸುವ ಮೂಲಕ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದುಕೊಂಡರು. ಕಾಲೇಜಿನ ದೈಹಿಕ ಶಿಕ್ಷಣದ ಉಪನ್ಯಾಸಕ ಪಾಲಾಕ್ಷ ಮತ್ತು ನಾಚಪ್ಪ ಅವರು ತರಬೇತಿ ನೀಡಿದ್ದರು.