ಕೂಡಿಗೆ, ಮಾ. ೩೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ೧೫ನೇ ಹಣಕಾಸು ಯೋಜನೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆಯಿತು. ಮೊದಲನೆಯ ಹಂತದ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಲು ತೀರ್ಮಾನಿಸಲಾಯಿತು.

ನಂತರ ಸಾರ್ವಜನಿಕರ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದು ಅವುಗಳ ವಿಲೇವಾರಿಗೆ ಒಪ್ಪಿಗೆಯ ನೀಡಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ನಿರ್ವಹಿಸಲು ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಿ ಮತ್ತು ಮಾಂಸ ಮಾರಾಟ ಲೈಸೆನ್ಸ್ ಪಡೆಯುವುದರ ಬಗ್ಗೆ ಚರ್ಚೆಗಳು ನಡೆದು ನಿಯಮಾನುಸಾರವಾಗಿ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿಗೆ ಸದಸ್ಯರುಗಳ. ಸಹಕಾರದೊಂದಿಗೆ ಪ್ರಗತಿಪರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು

ಅಭಿವೃದ್ಧಿಗೆ ಸದಸ್ಯರುಗಳ. ಸಹಕಾರದೊಂದಿಗೆ ಪ್ರಗತಿಪರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ತಮ್ಮ ನೋಂದಣಿ ಮಾಡಿಕೊಂಡರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸೇರಿದಂತೆ ಸದಸ್ಯರುಗಳು ಹಾಜರಿದ್ದರು